ಕುವೆಂಪು ಭಾಷಾ ಪ್ರಾಧಿಕಾರ: ಪ್ರಶಸ್ತಿಗಾಗಿ ಪುಸ್ತಕ ಸ್ವೀಕರಿಸುವ ಅವಧಿ ವಿಸ್ತರಣೆ
ಬೆಂಗಳೂರು, ಮಾ.12: ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಅನುವಾದಿತ ಪುಸ್ತಕಗಳಿಗೆ ನೀಡಲಿರುವ 2020ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪುಸ್ತಕಗಳನ್ನು ಸ್ವೀಕರಿಸುವ ಅವಧಿಯನ್ನು ಮಾ.30ರವರೆಗೆ ವಿಸ್ತರಿಸಲಾಗಿದೆ.
ಕನ್ನಡದಿಂದ ಇತರೆ ಯಾವುದೇ ಭಾಷೆಗಾಗಲಿ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಪುಸ್ತಕ ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ಅನುವಾದಿತ ಪ್ರಕಟನೆಗಳ ಪ್ರತಿ ಪುಸ್ತಕದ ನಾಲ್ಕು ಪ್ರತಿಗಳನ್ನು ಉಚಿತವಾಗಿ ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಜ್ಞಾನಭಾರತಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂ-56ಕ್ಕೆ ಅಂಚೆ ಇಲ್ಲವೇ ಖುದ್ದಾಗಿ ಬಂದು ಕಳುಹಿಸಬಹುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.23183311/12 ಹಾಗೂ www.kuvempubhashabharathi.karnataka.gov.in ನಲ್ಲಿ ಸಂಪರ್ಕಿಸಲು ಪ್ರಾಧಿಕಾರದ ರಿಜಿಸ್ಟ್ರಾರ್ ಈಶ್ವರ್ ಕು.ಮಿರ್ಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





