Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಧಾರ್ಮಿಕ ಸ್ಥಳಗಳ ಸ್ವರೂಪ ಕಾಪಾಡುವ...

ಧಾರ್ಮಿಕ ಸ್ಥಳಗಳ ಸ್ವರೂಪ ಕಾಪಾಡುವ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಕೆ

ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ12 March 2021 9:18 PM IST
share
ಧಾರ್ಮಿಕ ಸ್ಥಳಗಳ ಸ್ವರೂಪ ಕಾಪಾಡುವ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಕೆ

 ಹೊಸದಿಲ್ಲಿ,ಮಾ.12:1947ರ ಆಗಸ್ಟ್ 15ರಲ್ಲಿ ಅಸ್ತಿತ್ವದಲ್ಲಿದ್ದ ಆರಾಧನಾ ಸ್ಥಳದ ಮೇಲೆ ಹಕ್ಕುಸ್ಥಾಪಿಸಲು ಅಥವಾ ಅದರ ಸ್ವರೂಪವನ್ನು ಬದಲಾಯಿಸಲು ಕೋರಿ, ಕಾನೂನುಮೊಕದ್ದಮೆಯನ್ನು ದಾಖಲಿಸುವುದನ್ನು ನಿಷೇಧಿಸುವ 1991ರ ಕಾನೂನಿನ ಕೆಲವು ನಿರ್ದಿಷ್ಟ ನಿಯಮಗಳ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಸುಪ್ರೀಕೋರ್ಟ್ ಶುಕ್ರವಾರ ಈ ಬಗ್ಗೆ ಕೇಂದ್ರದ ಪ್ರತಿಕ್ರಿಯೆಯನ್ನು ಕೇಳಿದೆ.

 1991ರ ಕಾನೂನು ಮೂಲಭೂತವಾದಿ ಬರ್ಬರ ದಾಳಿಕೋರರು ಹಾಗೂ ಕಾನೂನು ಭಂಜಕರಿಂದ ದಾಳಿಗೊಳಗಾದ ಆರಾಧನಾ ಸ್ಥಳಗಳು ಅಥವಾ ಯಾತ್ರಾಸ್ಥಳಗಳ ಸ್ವರೂಪವನ್ನು ಆಗಸ್ಟ್ 15,1947ರ ವೇಳೆಗೆ ಅಸ್ವಿತ್ವದಲ್ಲಿದ್ದಂತಹ ರೀತಿಯಲ್ಲಿ ಉಳಿಸಿಕೊಳ್ಳುವುಕ್ಕೆ ಅವಕಾಶ ನೀಡುತ್ತದೆ. ಆದ್ದರಿಂದ '' ಏಕಪಕ್ಷೀಯ ಹಾಗೂ ಅವೈಚಾರಿಕವಾದ ಮತ್ತು ಅಪ್ರಸಕ್ತವಾದುದು'' ಎಂದು ಅರ್ಜಿಯು ಆರೋಪಿಸಿದೆ.

 1991ರ ಆರಾಧನಾ ಸ್ಥಳಗಳ ಕಾಯ್ದೆ (ವಿಶೇಷ ನಿಯಮಗಳು)ಯ 2,3 ಹಾಗೂ 4 ಸೆಕ್ಷನ್‌ಗಳು ಯಾವುದೇ ವ್ಯಕ್ತಿ ಅಥವಾ ಧಾರ್ಮಿಕ ಪಂಗಡಕ್ಕೆ ಸೇರಿದ ಆರಾಧನಾ ಸ್ಥಳದ ಮೇಲಿನ ಹಕ್ಕಿನ ಮರುಸ್ಥಾಪನೆಗೆ ನ್ಯಾಯಾಂಗ ಪರಿಹಾರವನ್ನು ಪಡೆಯುವ ಹಕ್ಕನ್ನು ಕಿತ್ತುಕೊಳ್ಳುತ್ತವೆ ಎಂದು ಬಿಜೆಪಿ ನಾಯಕ ಹಾಗೂ ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠವು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಗೋಪಾಲ ಸುಬ್ರಹ್ಮಣ್ಯನ್ ವಾದಿಸಿದ್ದರು.

 ಕೆಲವು ಹಿಂದೂ ಸಂಘಟನೆಗಳು ಮಥುರಾ, ಕಾಶಿಯಲ್ಲಿರುವ ಕೆಲವು ಧಾರ್ಮಿಕ ಸ್ಥಳಗಳ ಮೇಲಿನ ಹಕ್ಕನ್ನು ಮರುಸ್ಥಾಪಿಸಲು ಯತ್ನಿಸುತ್ತಿವೆಯಾದರೂ, ಅದಕ್ಕೆ 1991ರ ಕಾನೂನು ನಿಷೇಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿರುವುದು ಹೆಚ್ಚಿನ ಮಹತ್ವ ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X