Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜು...

ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ: ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ12 March 2021 9:39 PM IST
share
ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ: ಸುರೇಶ್ ಕುಮಾರ್

ಬೆಂಗಳೂರು, ಮಾ.12: ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೆ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿಸುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ವಿನಾಯಿತಿಯನ್ನು ನೀಡಿ ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಈ ಬಗ್ಗೆ ಸರಕಾರದ ಸ್ಪಷ್ಟೀಕರಣವನ್ನ ಬಿಡುಗಡೆ ಮಾಡಲಾಗಿದೆ. ಆರ್.ಟಿ.ಇ ಮರುಪಾವತಿ, ದಾಖಲಾತಿ/ಹಾಜರಾತಿಗಳನ್ನು ನೋಂದಣಿ, ನವೀಕರಣದ ನೆಪದಲ್ಲಿ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕೆಂದು ಇಲಾಖಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.  

ಸುಪ್ರೀಂಕೋರ್ಟ್ ತೀರ್ಪಿನನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ಕುರಿತಂತೆ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗಿರುವುದು ಸರಕಾರದ ಪ್ರಾಥಮಿಕ ಜವಾಬ್ದಾರಿಯಾಗಿದ್ದು, ಅಸ್ತಿತ್ವದಲ್ಲಿರುವ ಹಾಗೂ ಹೊಸ ಶಿಕ್ಷಣ ಸಂಸ್ಥೆಗಳಿಗೆ ವಿಶಿಷ್ಟ ನಿಯಮಗಳ ರಚನೆಗೆ ಈಗಾಗಲೇ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿಯನ್ನ ರಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ತಿಂಗಳ ಅವಧಿಯಲ್ಲಿ ಈ ಸಮಿತಿಯು ವಿದ್ಯಾರ್ಥಿ ಸಂವೇದಿತವಾದ ಶಾಲಾ ಸುರಕ್ಷತಾ ಕ್ರಮಗಳನ್ನು ಇಲ್ಲಿಯವರೆಗಿನ ಇಲಾಖಾ ದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಲಿದೆ. ಶಾಲೆಯ ಭೌತಿಕ ಸುರಕ್ಷತೆ, ಮೂಲಭೂತ ಸೌಕರ್ಯ, ವಿಪತ್ತು ನಿರ್ವಹಣೆ, ಆರೋಗ್ಯ, ಸಾರಿಗೆ, ತುರ್ತು ಸನ್ನದ್ದತೆ ಸೇರಿದಂತೆ ಎಲ್ಲ ಆಯಾಮಗಳನ್ನು ಈ ಸಮಿತಿಯು ಸಮಗ್ರವಾಗಿ ಅವಲೋಕಿಸಲಿದೆ. ಈ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರಾಜಿ ಇಲ್ಲದ ರೀತಿಯಲ್ಲಿ ನಿಯಮಗಳನ್ನು ರೂಪಿಸಲಿದೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X