Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ಬಹುಕೋಟಿ ವಂಚನೆ ಪ್ರಕರಣ: 7...

ಐಎಂಎ ಬಹುಕೋಟಿ ವಂಚನೆ ಪ್ರಕರಣ: 7 ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ12 March 2021 10:14 PM IST
share
ಐಎಂಎ ಬಹುಕೋಟಿ ವಂಚನೆ ಪ್ರಕರಣ: 7 ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಕೆ

ಬೆಂಗಳೂರು, ಮಾ.12: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣಗಳ ವಿಚಾರಣೆ ನಡೆಸುವ ಪ್ರಧಾನ ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ಐಎಂಎ ಸಂಸ್ಥೆಯ ಪರವಾಗಿ ವರದಿ ನೀಡುವಂತೆ ಆಗ್ರಹಿಸಿ, ಅಂದಿನ ಬೆಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಆಯುಕ್ತರಿಗೆ ಬಿಡಿಎನ ಅಂದಿನ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ಡಿ.ಕುಮಾರ್ ಸೂಚನೆಯಂತೆ, ಐಎಂಎ ಸಂಸ್ಥೆಯ ಸಿಇಒ ಹಾಗೂ ಎಂಡಿಯ ನಿರ್ದೇಶನದಂತೆ ಸುಮಾರು 5 ಕೋಟಿ ರೂ.ಗಳನ್ನು ನಾಲ್ಕು ಕಂತುಗಳಾಗಿ(1.5 ಕೋಟಿ, 1 ಕೋಟಿ, 1.5 ಕೋಟಿ ಹಾಗೂ 1 ಕೋಟಿ ರೂ.) 2019ರ ಎಪ್ರಿಲ್-ಮೇ ನಡುವೆ ನೀಡಲಾಗಿದೆ ಎಂದು ತನಿಖೆ ವೇಳೆ ತಿಳಿದು ಬಂದಿರುವುದಾಗಿ ಜಾರ್ಚ್‍ಶೀಟ್‍ನಲ್ಲಿ ತಿಳಿಸಲಾಗಿದೆ.

ಆದರೆ, ಅಂದಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹಾಯಕ ಆಯುಕ್ತರು ಸಲ್ಲಿಸಿದ್ದ ವರದಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಕಾನೂನು ಇಲಾಖೆಯಿಂದ ಅಭಿಪ್ರಾಯ ಕೋರಿದ್ದಲ್ಲದೆ, ಈ ವಿಚಾರದಲ್ಲಿ ತನಿಖೆ ನಡೆಸುವಂತೆ ಡಿಜಿಪಿಗೆ ಶಿಫಾರಸ್ಸು ಮಾಡಿದ್ದರು. ಐಎಂಎ ಸಂಸ್ಥೆಯವರು ತಿಳಿಸಿದ್ದ ಕೆಲಸ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಬಿಡಿಎ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ತಾವು ಪಾವತಿಸಿರುವ ಹಣ ಹಿಂದಿರುಗಿಸುವಂತೆ ಒತ್ತಡ ಹೇರಿದ್ದರು. ಅದರಂತೆ, ಆತ 30 ಲಕ್ಷ ರೂ.ಗಳನ್ನು ವಾಪಸ್ ನೀಡಿದ್ದು, ಉಳಿದ ಹಣ ಪಾವತಿಸುವವರೆಗೆ ಭದ್ರತೆಗಾಗಿ 2 ಹಾಗೂ 2.50 ಕೋಟಿ ರೂ.ಮೌಲ್ಯದ ಚೆಕ್‍ಗಳನ್ನು ಐಎಂಎ ಸಂಸ್ಥೆಗೆ ನೀಡಿರುವುದು ತಿಳಿದು ಬಂದಿದೆ ಎಂದು ಸಿಬಿಐ ಹೇಳಿದೆ.

ತನಿಖೆ ವೇಳೆ ಕಾರ್ಯನಿರ್ವಾಹಕ ಇಂಜಿನಿಯರ್ ನೀಡಿದ್ದ ಈ ಎರಡು ಚೆಕ್‍ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಐಎಂಎ ಸಂಸ್ಥೆಯ ನಿರ್ದೇಶಕರ ನಡುವೆ ನಡೆದಿರುವ ವಾಟ್ಸ್ ಆ್ಯಪ್ ಚಾಟ್‍ಗಳ ವಿವರವನ್ನು ಕಲೆ ಹಾಕಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಪ್ರಕರಣಗಳಲ್ಲಿಯೂ ಸಿಬಿಐ ನಾಲ್ಕು ಪ್ರಕರಣಗಳನ್ನು ದಾಖಲು ಮಾಡಿದೆ. ಅಲ್ಲದೆ, ಹಲವು ಚಾರ್ಜ್‍ಶೀಟ್‍ಗಳನ್ನು ದಾಖಲು ಮಾಡಿದೆ.

ಆರೋಪಿಗಳ ವಿವರ

ಬಿಡಿಎ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ಡಿ.ಕುಮಾರ್, ಐಎಂಎ ಸಂಸ್ಥೆಯ ಸಿಇಒ ಮತ್ತು ಎಂಡಿ ಮುಹಮ್ಮದ್ ಮನ್ಸೂರ್ ಖಾನ್, ನಿರ್ದೇಶಕರಾದ ನಿಝಾಮುದ್ದೀನ್ ಅಹ್ಮದ್, ವಸೀಮ್, ನವೀದ್ ಅಹ್ಮದ್, ನಾಸಿರ್ ಹುಸೇನ್ ಹಾಗೂ ಐಎಂಎ ಸಂಸ್ಥೆ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X