Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.27: ಉಳ್ಳಾಲ ತಾಲೂಕು ಬ್ಯಾರಿ...

ಮಾ.27: ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ12 March 2021 10:16 PM IST
share

ಮಂಗಳೂರು, ಮಾ.12: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ)ಯ ಸಹಕಾರದಲ್ಲಿ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನವು ಮಾ.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯ ಲಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.

ಅಕಾಡಮಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲ ತಾಲೂಕು ಘೋಷಣೆಯಾದ ಬಳಿಕ ನಡೆಯುವ ಪ್ರಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನ ಇದಾಗಿದೆ. ಅಲ್ಲದೆ ಬ್ಯಾರಿ ಆಂದೋಲನದ ಇತಿಹಾಸದಲ್ಲೇ ನಡೆಯುವ ತಾಲೂಕು ಮಟ್ಟದ ಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನವೂ ಇದಾಗಿದೆ. ಸಾಹಿತಿಕ, ಕವಿ ಆಲಿಕುಂಞಿ ಪಾರೆ ಅವರನ್ನು ಸಮ್ಮೇಳ ನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪದ್ಮಶ್ರೀ ಪುರಸ್ಕೃತರ ಹರೇಕಳ ಹಾಜಬ್ಬ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಡಾ. ಕೆಎಂ ಮುನೀರ್ ಬಾವಾ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಅತಿಥಿಗಳಾಗಿ ಉಳ್ಳಾಲ ನಗರಸಭೆಯ ಕೌನ್ಸಿಲರ್‌ಗಳಾದ ಅಸ್ಗರ್ ಅಲಿ ಮತ್ತು ಇಸ್ಮಾಯೀಲ್ ಯು.ಎ., ಮದನಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಹಾಜಿ ಯುಕೆ ಇಬ್ರಾಹೀಂ, ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಬ್ಯಾರಿ ಅಕಾಡಮಿಯ ಮಾಜಿ ಸದಸ್ಯ ಫಝಲ್ ಅಸೈಗೋಳಿ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸದಸ್ಯ ಸಿರಾಜ್ ಮುಡಿಪು, ರಾಜ್ಯ ಹಜ್ ಕಮಿಟಿಯ ಸದಸ್ಯ ಹನೀಫ್ ನಿಝಾಮಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭವನ್ನು ಶಾಸಕ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉಳ್ಳಾಲ ನಗರಸಭೆಯ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ದಿ ಮೈಸೂರು ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ.ಜಿಲ್ಲಾ ವಕ್ಫ್  ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುರ್ರಶೀದ್ ಉಳ್ಳಾಲ್, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್, ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಇಬ್ರಾಹೀಂ ಕೋಡಿಜಾಲ್, ಮಂಗಳೂರು ವಿವಿ ಬ್ಯಾರಿ ಡಿಪ್ಲೊಮಾ ಕೋರ್ಸ್‌ನ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಬ್ಯಾರಿ ಲಿಪಿ ರಚನೆ ಮತ್ತು ಸಂಶೋಧನಾ ಸಮಿತಿಯ ಸದಸ್ಯರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹೈದರ್ ಅಲಿ ಕೀಲಾರಿ ಮತ್ತು ಎ.ಕೆ.ಕುಕ್ಕಿಲ, ಸಾಮಾಜಿಕ ಮುಖಂಡರಾದ ಹೈದರ್ ಪರ್ತಿಪ್ಪಾಡಿ, ನಝೀರ್ ಉಳ್ಳಾಲ್, ಫಾರೂಕ್ ಉಳ್ಳಾಲ್ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ ಮತ್ತು ಎರಡು ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಭಾಷಣ ಸ್ಪರ್ಧೆ, ಅಡುಗೆ ಸ್ಪರ್ಧೆ, ಮೆಹಂದಿ ಸ್ಪರ್ಧೆ ನಡೆಯಲಿದೆ. ಅಲ್ಲದೆ 15 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಕೆಎಂ ಮುನೀರ್ ಬಾವಾ, ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಅಕಾಡಮಿಯ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X