ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಹಿರಿಯ ಸಂಶೋಧಕ ಡಾ.ಎ.ವಿ.ನಾವಡ ಆಯ್ಕೆ

ಬೆಂಗಳೂರು, ಮಾ.12: ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2020ನೇ ಸಾಲಿನ ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಹಿರಿಯ ಸಂಶೋಧಕ ಡಾ.ಎ.ವಿ.ನಾವಡ ಆಯ್ಕೆಯಾಗಿದ್ದಾರೆ.
ಶುಕ್ರವಾರ ಡಾ.ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ, ಡಾ.ಎ.ವಿ.ನಾವಡರನ್ನು 2020ನೇ ಸಾಲಿನ ಡಾ. ಟಿ.ವಿ. ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ. ಪ್ರಶಸ್ತಿಯು 10 ಸಾವಿರ ರೂ., ಪುರಸ್ಕಾರವನ್ನೊಳಗೊಂಡಿದೆ.
ಈ ವೇಳೆ ಆಯ್ಕೆ ಸಮಿತಿ ಸದಸ್ಯರಾದ ಟಿ.ವಿ.ವಿದ್ಯಾಶಂಕರ್, ಎಲ್.ಎಸ್. ಶಿವಮೂರ್ತಿ, ಗೌರವ ಕಾರ್ಯದರ್ಶಿ ಡಾ. ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್ ಹಾಗೂ ಗೌರವ ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಕಸಾಪ ಪ್ರಕಟನೆಯಲ್ಲಿ ತಿಳಿಸಿದೆ.
Next Story





