ಉಪ್ಪಿನಂಗಡಿ : ಐಸ್ ಕ್ರೀಮ್ ವ್ಯಾಪಾರಿಗೆ ತಂಡದಿಂದ ಹಲ್ಲೆ
ಉಪ್ಪಿನಂಗಡಿ : ಐಸ್ ಕ್ರೀಮ್ ಮಾರಾಟದ ವಿಚಾರದಲ್ಲಿ ಉಂಟಾದ ಮಾತಿನ ಚಕಮಕಿಯು ಐಸ್ ಕ್ರೀಮ್ ಮಾರಾಟಗಾರನಿಗೆ ಹಲ್ಲೆ ನಡೆಸಿ, ವಾಹನವನ್ನು ಜಖಂಗೊಳಿಸುವ ಕೃತ್ಯಕ್ಕೆ ಕಾರಣವಾದ ಘಟನೆ ಗುರುವಾರ ತಡ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿಯ ಶಾಲಾ ರಸ್ತೆಯಲ್ಲಿ ವಾಹನವೊಂದರಲ್ಲಿ ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯು ಪೊಲೀಸರಿಗೆ ದೂರು ನೀಡಿದ್ದು, ದುಷ್ಕೃತ್ಯವೆಸಗಿದ 7 ಮಂದಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿತರ ವಿರುದ್ದ ಅಗತ್ಯ ಕಾನೂನು ಕ್ರಮ ಜರುಗಿಸುವ ಸಂಬಂಧ ಗೌಪ್ಯತಾ ಪಾಲನೆ ಮಾಡಬೇಕಾದ ಅನಿವಾರ್ಯತೆಯಿಂದಾಗಿ ಆರೋಪಿತರ ಹೆಸರನ್ನು ಬಹಿರಂಗಪಡಿಸಲಾಗದೆಂದು ಉಪ್ಪಿನಂಗಡಿ ಠಾಣಾ ಎಸೈ ತಿಳಿಸಿದ್ದಾರೆ.
Next Story





