ಸಿಡಿ ಪ್ರಕರಣ; ಎಸ್ಐಟಿಗೆ ಸರ್ವ ಸ್ವಾತಂತ್ರ್ಯ ನೀಡಲಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡ ಎಸ್ಐಟಿಗೆ ಸರ್ವ ಸ್ವಾತಂತ್ರ್ಯವನ್ನು ನೀಡಲಾಗಿದೆ. ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಬೆಂಗಳೂರಿನಲ್ಲಿ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಮೀಸಲಾತಿಗೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಸತ್ಯಾಗ್ರಹ ನಡೆಸುತ್ತಿದೆ. ಸೋಮವಾರದಿಂದ ಅಹೋರಾತ್ರಿ ಹೋರಾಟ ನಡೆಸುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ ಜತೆ ಈಗಾಗಲೇ ಮಾತನಾಡಿದ್ದೇನೆ. ಮತ್ತೆ ಮಾತನಾಡುತ್ತೇನೆ. ವಿಧಾನಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ವಿಷಯವನ್ನು ಸ್ಪಷ್ಟಪಡಿಸಿದ್ದೇನೆ ಎಂದು ಸಚಿವ ಬೊಮ್ಮಾಯಿ ಹೇಳಿದರು.
Next Story





