Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವುದು...

ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವುದು ವಕೀಲರ ಕರ್ತವ್ಯ: ನ್ಯಾ.ಅರವಿಂದ ಕುಮಾರ್

ವಕೀಲರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಉತ್ಸವ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 March 2021 7:42 PM IST
share
ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವುದು ವಕೀಲರ ಕರ್ತವ್ಯ: ನ್ಯಾ.ಅರವಿಂದ ಕುಮಾರ್

ಉಡುಪಿ, ಮಾ.13: ನ್ಯಾಯ ವಿತರಣೆಯಿಂದ ವಂಚಿತರಾಗಿರುವವರಿಗೆ ನ್ಯಾಯ ಕೊಡಿಸುವುದು ವಕೀಲರ ಆದ್ಯ ಕರ್ತವ್ಯ. ಅದಕ್ಕೆ ಜನರಿಗೆ ಕಾನೂನು ಅರಿವು ಮೂಡಿಸುವ ಕಾರ್ಯವನ್ನು ವಕೀಲರು ಮಾಡಬೇಕು. ಪ್ರತಿಯೊಬ್ಬರಿಗೂ ನ್ಯಾಯ ವಿತರಣೆಯಲ್ಲಿ ಹಕ್ಕು ಇದೆ ಎಂಬುದನ್ನು ಮನವರಿಕೆ ಮಾಡಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಹೇಳಿದ್ದಾರೆ.

ಉಡುಪಿ ವಕೀಲರ ಸಂಘದ ವತಿಯಿಂದ ವಕೀಲರಿಗಾಗಿ ಉಡುಪಿ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನ ಗಳ ಕರ್ನಾಟಕ ರಾಜ್ಯ ಮಟ್ಟದ ಸಾಂಸ್ಕೃತಿಕ ಹಬ್ಬ ‘ಉತ್ಸವ್’ ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಹಕ್ಕುಗಳ ಬಗ್ಗೆ ಯಾವುದೇ ಅರಿವು ಇಲ್ಲ. ಆದುದರಿಂದ ಪ್ರತಿ ಹಳ್ಳಿಗಳಿಗೆ ವಕೀಲರ ತಂಡ ಗಳನ್ನು ರಚಿಸಿಕೊಂಡು ಹೋಗಿ ಕಾನೂನು ಅರಿವು ಮೂಡಿಸಬೇಕು. ಈ ಕಾನೂನು ಅರಿವು ಮೂಡಿ ಸುವುದರಿಂದ ವಕೀಲರ ಸಮುದಾಯಕ್ಕೆ ಲಾಭವಾಗುತ್ತದೆ. ಕೋರ್ಟ್‌ಗಳಲ್ಲಿ ಕೇಸುಗಳು ಜಾಸ್ತಿ ಇದೆ ಎಂಬುದನ್ನು ಬಿಟ್ಟು ಎಲ್ಲರಿಗೂ ನ್ಯಾಯ ಒದಗಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ವಕೀಲರು ಅಂದರೆ ಕೇವಲ ಶುಲ್ಕ ತೆಗೆದುಕೊಳ್ಳುವವರು ಎಂಬ ಅಭಿಪ್ರಾಯ ವನ್ನು ಜನರ ಮನಸ್ಸಿನಿಂದ ಹೋಗಲಾಡಿಸಬೇಕು. ಅದಕ್ಕಾಗಿ ವಕೀಲರು ಕೇವಲ ಇದಕ್ಕೆ ಮಾತ್ರ ಸೀಮಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸಿ ತೋರಿಸಬೇಕು. ಆ ಮೂಲಕ ಉಡುಪಿ ವಕೀಲರ ಸಂಘ ಇಡೀ ದೇಶಕ್ಕೆ ಮಾದರಿಯಾಗಬೇಕು. ಸಾಕಷ್ಟು ಒತ್ತಡದಲ್ಲಿ ಕೆಲಸ ನಿರ್ವಹಿಸುವ ವಕೀಲರು, ಇದರಿಂದ ಹೊರಗೆ ಬರಲು ಸಾಂಸ್ಕೃತಿಕ ಕಾರ್ಯಕ್ರಮಗಳ ಅಗತ್ಯ ಇದೆ ಎಂದು ಅವರು ತಿಳಿಸಿದರು.

ವಕೀಲರ ಸಂಘವು ನ್ಯಾಯಾಧೀಶರನ್ನು ಉತ್ಪಾದಿಸುವ ಕೇಂದ್ರ ಆಗಿದೆ. ಆದುದರಿಂದ ಉತ್ತಮ ವಕೀಲರ ಸಂಘದಿಂದ ಉತ್ತಮ ನ್ಯಾಯಾಧೀಶರು ಸೃಷ್ಠಿಯಾಗುತ್ತಾರೆ. ಒಳ್ಳೆಯ ನ್ಯಾಯಾಧೀಶರು ಇರುವಲ್ಲಿ ಒಳ್ಳೆಯ ವಕೀಲರ ಸಂಘ ಇರುತ್ತದೆ. ಅದಕ್ಕಾಗಿ ಕಠಿಣ ಪರಿಶ್ರಮ ಪಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಮಾತನಾಡಿದರು. ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ಉಪಸ್ಥಿತರಿದ್ದರು.

ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಎಚ್.ರಾಘವೇಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X