ದ.ಕ. ಜಿಲ್ಲೆ: 43 ಮಂದಿಗೆ ಕೊರೋನ ಸೋಂಕು
ಮಂಗಳೂರು, ಮಾ.13: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಕರಣದಲ್ಲಿ ಪುನಃ ಏರಿಕೆ ಕಂಡುಬರುತ್ತಿದೆ. ದಿನಂಪ್ರತಿ 10ರ ಆಸುಪಾಸಿನಲ್ಲಿರುತ್ತಿದ್ದ ಸೋಂಕಿತರ ಸಂಖ್ಯೆ ದಿಢೀರ್ ಅರ್ಥ ಶತಕದತ್ತ ದಾಪುಗಾಲಿಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 43 ಮಂದಿಗೆ ಸೋಂಕು ತಗುಲಿದ್ದು, 25 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 34,708 ಸೋಂಕಿತರ ಪೈಕಿ 33,717 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 741 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 250 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೆ 36,386 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 37,45,110 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story





