Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅಪರೂಪದ...

ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ13 March 2021 10:17 PM IST
share
ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತ್ರಚಿಕಿತ್ಸೆ

ಕೊಣಾಜೆ : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ದೇರಳಕಟ್ಟೆಯ ಕೆ.ಎಸ್‌.ಹೆಗ್ಡೆ ಆಸ್ಪತ್ರೆಯ ವೈದ್ಯರ ತಂಡವು ಸರ್ಜಿಕಲ್ ವೆಂಟ್ರಿಕುಲಾರ್ ರೆಸ್ಟೊರೇಷನ್ ಎಂಬ ಕ್ಲಿಷ್ಟಕರವಾದ ಮತ್ತು ಅಪರೂಪವಾದ ಯಶಸ್ವಿ  ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.

ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾದ 56 ವರ್ಷದ ಹಾವೇರಿಯ ರೋಗಿಯೊಬ್ಬರನ್ನು  ಹೃದ್ರೋಗ ತಜ್ಞರು ತಪಾಸಣೆ  ನಡೆಸಿದಾಗ  ಆತನಿಗೆ  ತೀವ್ರ ತರದ ಹೃದಯ ಸಮಸ್ಯೆಗಳಿರುವುದನ್ನು ಪತ್ತೆ ಹಚ್ಚಲಾಯಿತು.  ಆತನ ಹೃದಯವು ಸಹಜ ಸ್ಥಿತಿಗಿಂತಲೂ ಕೆಳಮಟ್ಟದಲ್ಲಿ ಅಂದರೆ ಶೇಖಡಾ 20 ರಷ್ಟು  ಮಾತ್ರ   ಯಶಸ್ವಿಯಾಗಿ  ಕಾರ್ಯನಿರ್ವಹಿಸುತ್ತಿದ್ದು,  ಅದನ್ನು ಸರಿಪಡಿಸಲು ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಎಂ. ಗೋಪಾಲಕೃಷ್ಣನ್ ಮತ್ತು ಡಾ. ನರೇಶ್ ಚಂದ್ರ ಹೆಗ್ಡೆ ಹೆಚ್. ಹೃದ್ರೋಗ ಅರಿವಳಿಕೆ ತಜ್ಞರಾದ ಡಾ. ಮಂಜುನಾಥ್ ಕಾರ್ನಾಥ್  ಇವರುಗಳನ್ನೊಳಗೊಂಡ ವೈದ್ಯರ ತಂಡವು ಸರ್ಜಿಕಲ್ ವೆಂಟ್ರಿಕುಲಾರ್ ರೆಸ್ಟೊರೇಷನ್ ಎಂಬ ಕ್ಲಿಷ್ಟಕರವಾದ  ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದೆ.

ಇವರ ತಂಡದೊಂದಿಗೆ ತೀವ್ರ ನಿಗಾ ಘಟಕದ ಮುಖ್ಯಸ್ಥರಾದ ಡಾ. ನರೇಶ್ ರೈ ಹಾಗೂ ತಂಡವು  ಜೊತೆಗೂಡಿ  ಕಾರ್ಯ ನಿರ್ವಹಿಸಿರುತ್ತಾರೆ. ಈ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ರೋಗಿಯು ಸಹಜ ಸ್ಥಿತಿಗೆ ಮರಳಿದ್ದು, ಚೇತರಿಸಿಕೊಂಡ ಬಳಿಕ ಆಸ್ಪತ್ರೆ ಯಿಂದ ಬಿಡುಗಡೆಯಾಗಿರುತ್ತಾರೆ.

ಇಂತಹ ಖಾಯಿಲೆಯಲ್ಲಿ  ಶೇಖಡಾ 70ರಷ್ಟು ಮರಣ ಪ್ರಮಾಣ  ಹೊಂದಿರುವುದರಿಂದ  ಈ  ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ವಿರಳವಾಗಿ ಮಾಡಲಾಗುತ್ತಿದೆ. ಕೆಲವೇ ಯಶಸ್ವಿ  ಶಸ್ತ್ರಚಿಕಿತ್ಸೆಗಳಲ್ಲಿ ಇದು ಕೂಡಾ ಒಂದಾಗಿದ್ದು, ಈ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು  ನಿಭಾಯಿಸಲು ಹೃದ್ರೋಗ ತಜ್ಞರು, ಹೃದಯ ಶಸ್ತ್ರಚಿಕಿತ್ಸಕರು, ಅರಿವಳಿಕೆ ತಜ್ಞರು, ತೀವ್ರಚಿಕಿತ್ಸಾ ವಿಭಾಗದ ತಜ್ಞರು ಮತ್ತು ಅನುಭವಿ ಶುಶ್ರೂಷಾ ಸಿಬ್ಬಂದಿ ಸೇರಿದಂತೆ ಸಮಗ್ರ ವೈದ್ಯರ ತಂಡವನ್ನು ಈ ಆಸ್ಪತ್ರೆಯು ಹೊಂದಿದೆ ಎಂದು ವೈದ್ಯಕೀಯ ಅಧೀಕ್ಷಕರಾಗಿರುವ  ಮೇಜರ್ ಡಾ. ಶಿವಕುಮಾರ್ ಹಿರೇಮಠ್ ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X