Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ...

ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 March 2021 6:08 PM IST
share
ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮಾ. 14: ‘ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ' ಎಂದು ಹೇಳಿದ್ದಾರೆ.

‘ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‍ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೆ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು' ಎಂದು ಅವರು ಸಲಹೆ ಮಾಡಿದ್ದಾರೆ.

‘ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?'

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X