Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಉಡುಪಿ...

ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಉಡುಪಿ ನಗರಸಭೆಯಿಂದ ಅಂಗಡಿ ಪರವಾನಿಗೆ ರದ್ದತಿಗೆ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ14 March 2021 8:28 PM IST
share
ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಉಡುಪಿ ನಗರಸಭೆಯಿಂದ ಅಂಗಡಿ ಪರವಾನಿಗೆ ರದ್ದತಿಗೆ ನಿರ್ಣಯ

ಉಡುಪಿ, ಮಾ.14: ಕಸ ವಿಲೇವಾರಿ ಕಾರ್ಮಿಕನಿಗೆ ಹಲ್ಲೆ ನಡೆಸಿರುವ ಬಗ್ಗೆ ನಗರಸಭೆಯಿಂದ ರವಿವಾರ ಕರೆದ ತುರ್ತು ಕೌನ್ಸಿಲ್ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ನಗರದ ಸಿಟಿ ಬಸ್ ನಿಲ್ದಾಣದಲ್ಲಿರುವ ಅಸ್ಮಾ ಇಲೆಕ್ಟ್ರಾನಿಕ್ಸ್ ಅಂಗಡಿಯ ವ್ಯಾಪಾರ ಪರವಾನಿಗೆಯನ್ನು ರದ್ದುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಮಾತ ನಾಡಿ, ಕಾರ್ಮಿಕರ ಸುರಕ್ಷತೆಯ ಬಗ್ಗೆ ನಗರಸಭೆಗೆ ಬಹಳ ದೊಡ್ಡ ಜವಾಬ್ದಾರಿ ಇದೆ. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ಪಕ್ಷಾತೀತವಾಗಿ ಅನ್ಯಾಯ ಆಗಿರುವ ಕಾರ್ಮಿಕನಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಲಾಗುವುದು ಎಂದರು.

ನಾವು ಆರೋಪಿಗಳಿಗೆ ಯಾವುದೇ ರಕ್ಷಣೆ ನೀಡಿಲ್ಲ. ಶಾಸಕರು ಘಟನೆ ನಡೆದ ತಕ್ಷಣವೇ ಎಸ್ಪಿಯವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕ್ರಮಕ್ಕೆ ಸೂಚಿಸಿದ್ದಾರೆ. ಅದೇ ರೀತಿ ನಗರಸಭೆಯಿಂದ ಪೊಲೀಸರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಿದ್ದೇವೆ. ನಗರಸಭೆ ಎಂದಿಗೂ ಕಾರ್ಮಿಕರ ಪರವಾಗಿ ನಿಲ್ಲುತ್ತದೆ. ಆದರೆ ಈ ವಿಚಾರವನ್ನು ಕೆಲವು ಸಂಘಟನೆಗಳು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ನಗರಸಭೆ ಇಡೀ ತಂಡ ಪೌರಾಯುಕ್ತರಿಂದ ಪೌರ ಕಾರ್ಮಿಕರವರೆಗಿನ ಎಲ್ಲ ಸಿಬ್ಬಂದಿಗಳ ಪರವಾಗಿ ಇರುತ್ತದೆ. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಈಗಾಗಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂತಹ ಘಟನೆಯನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರ ಸಂಬಂಧಿಕರು ಮಾತ್ರವಲ್ಲ ನನ್ನ ಸಂಬಂಧಿಕರಾಗಲಿ, ನಗರಸಭೆ ಸದಸ್ಯರು ಮಾಡಿದರೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾರ್ಮಿಕರ ಮೇಲೆ ಹಲ್ಲೆ ನಡೆಸುವಂತಹವರಿಗೆ ಸ್ಪಷ್ಟ ಸಂದೇಶ ನೀಡುವ ನಿಟ್ಟಿನಲ್ಲಿ ಈ ಪ್ರಕರಣದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಅದರಂತೆ ಅಂಗಡಿಯ ಪರವಾನಿಗೆ ರದ್ದುಗೊಳಿಸಿ ಬೀಗ ಹಾಕುವ ಕೆಲಸ ಮಾಡಲಾಗುವುದು. ಇಂತಹ ಘಟನೆಗಳು ಇನ್ನು ಮುಂದೆ ಎಲ್ಲಿಯೂ ಮರುಕಳಿಸಬಾರದು ಎಂದು ಶಾಸಕರು ತಿಳಿಸಿದರು.

ಅದೇ ರೀತಿ ಈ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ಕೆಲವು ಸಂಘಟನೆಯ ಮುಖಂಡರು ನಗರಸಭೆ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಹೀಯಾಳಿಸಿರುವುದು ಕೂಡ ಖಂಡನೀಯ. ಇವರ ವಿರುದ್ಧವೂ ಖಂಡನಾ ನಿರ್ಮಯ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಭೆಗೆ ವಿರೋಧ ಪಕ್ಷದ ಸದಸ್ಯರು ಗೈರು ಹಾಜರಾಗಿರುವ ಬಗ್ಗೆ ಮತ್ತು ಮಾ.16ರಂದು ನಗರಸಭೆ ಎದುರು ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ದಸಂಸ ಸಂಘಟನೆಯ ಮುಖಂಡರ ವಿರುದ್ಧ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಉದಯ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X