ರಾಜ್ಯಮಟ್ಟದ ವಕೀಲರ ಸಾಂಸ್ಕೃತಿಕ ಹಬ್ಬ: ಮಂಗಳೂರು ವಕೀಲರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ, ಮಾ.14: ಉಡುಪಿ ವಕೀಲರ ಸಂಘದ ವತಿಯಿಂದ ವಕೀಲರಿಗಾಗಿ ಉಡುಪಿ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಕರ್ನಾಟಕ ರಾಜ್ಯ ಮಟ್ಟದ ಸಾಂಸ್ಕೃತಿಕ ಹಬ್ಬ ‘ಉತ್ಸವ್’ದಲ್ಲಿ ಮಂಗಳೂರು ವಕೀಲರ ಸಂಘವು 30ಸಾವಿರ ರೂ. ನಗದು ಮತ್ತು ಟ್ರೋಫಿಯೊಂದಿಗೆ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ದ್ವಿತೀಯ ಸಮಗ್ರ ಪ್ರಶಸ್ತಿಯನ್ನು 20ಸಾವಿರ ರೂ. ನಗದು ಮತ್ತು ಟ್ರೋಫಿ ಯೊಂದಿಗೆ ಬೆಂಗಳೂರು ವಕೀಲರ ಸಂಘ ಮತ್ತು ಮೂರನೆ ಸಮಗ್ರ ಪ್ರಶಸ್ತಿ ಯನ್ನು 10ಸಾವಿರ ರೂ. ನಗದು ಮತ್ತು ಟ್ರೋಫಿಯೊಂದಿಗೆ ಕೊಪ್ಪ ವಕೀಲರ ಸಂಘ ಪಡೆದುಕೊಂಡಿತು.
ರವಿವಾರ ಸಂಜೆ ನಡೆದ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಸಮಾರೋಪ ಭಾಷಣ ಮಾಡಿದರು.
ಅಧ್ಯಕ್ಷತೆಯನ್ನು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನರಹರಿ ಪ್ರಭಾಕರ್ ಮರಾಠೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬೆಂಗಳೂರು ವಕೀಲರ ಅಸೋಸಿಯೇಶನ್ ಅಧ್ಯಕ್ಷ ಎ.ಪಿ.ರಂಗನಾಥ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವತಕರ್ ಡಾ.ಜಿ.ಶಂಕರ್ ಮಾತನಾಡಿದರು.
ಸಾಂಸ್ಕೃತಿಕ ಕಾರ್ಯದರ್ಶಿ ಎಚ್.ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.







