ಮೈಸೂರು: ವಿದ್ಯಾರ್ಥಿನಿಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು,ಮಾ.14: ಮಾನಸಗಂಗೋತ್ರಿ ಪುರುಷರ ವಿದ್ಯಾರ್ಥಿನಿಲಯದ ಬ್ಲಾಕ್ 1ರ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿ ಕೊಠಡಿಯಲ್ಲಿರುವ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈತ ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನ ಮಾಡುತ್ತಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





