ಕರಿಮೆಣಸು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಆಘಾತ: ಯುವಕ ಮೃತ್ಯು

ಚಿಕ್ಕಮಗಳೂರು, ಮಾ.15: ಕರಿಮೆಣಸು ಕೊಯ್ಯತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಸ್ಪರ್ಶಕ್ಕೊಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕೋಳೂರು ಗ್ರಾಮ ನಿವಾಸಿ ಮಹಾಲಿಂಗಂ(25) ಎಂದು ಗುರುತಿಸಲಾಗಿದೆ.
ಮಹಾಲಿಂಗಂ ಅವರು ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಮಹಾಲಿಂಗಂ ಅಲ್ಯೂಮಿನಿಯಂ ಏಣಿಯನ್ನು ಬಳಸಿ ಕರಿಮೆಣಸು ಕೊಯ್ಯುತ್ತಿದ್ದರೆನ್ನಲಾಗಿದೆ. ಈ ವೇಳೆ ಏಣಿಯು ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗೆ ತಗಲಿದ್ದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ.
ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





