Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್‌ಟಿಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ...

ಆರ್‌ಟಿಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪತ್ನಿ ಮಕ್ಕಳಿಂದ ಉಪವಾಸ ಸತ್ಯಾಗ್ರಹ

ರಾಜಕೀಯ ಒತ್ತಡದಿಂದ ಆರೋಪಿಗಳಿಗೆ ರಕ್ಷಣೆ: ಪ್ರವೀಣ್ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ15 March 2021 6:00 PM IST
share
ಆರ್‌ಟಿಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪತ್ನಿ ಮಕ್ಕಳಿಂದ ಉಪವಾಸ ಸತ್ಯಾಗ್ರಹ

ಉಡುಪಿ, ಮಾ.15: ಶಂಕರ ಶಾಂತಿ ಮೇಲೆ ಹಲ್ಲೆ ನಡೆದು ಇಂದಿಗೆ 23 ದಿನಗಳಾಗಿವೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಇನ್ನು ಬಂಧಿಸಿಲ್ಲ. ಇದಕ್ಕೆ ರಾಜಕೀಯ ಒತ್ತಡವೇ ಕಾರಣ. ಈ ಘಟನೆ ಬಗ್ಗೆ ಮೌನ ವಹಿಸಿರುವ ಜನಪ್ರತಿನಿಧಿಗಳು, ಆರೋಪಿಗಳಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಆರೋಪಿಸಿದ್ದಾರೆ.

ಬಾರಕೂರಿನ ಆರ್‌ಟಿಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾದ ಶಂಕರ ಶಾಂತಿ ಪತ್ನಿ ಪೂರ್ಣಿಮಾ ಮತ್ತು ಮಕ್ಕಳಿಂದ ಉಪವಾಸ ಸತ್ಯಾಗ್ರಹ ಹಾಗೂ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಮತ್ತು ಹಲವು ಸಂಘ ಸಂಸ್ಥೆಗಳ ಬೆಂಬಲ ದೊಂದಿಗೆ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಹಲ್ಲೆಗೆ ಸಂಬಂಧಿಸಿ ಎಲ್ಲ ರೀತಿಯ ಸಾಕ್ಷ್ಯಗಳಿವೆ. ಶಂಕರ ಶಾಂತಿಗೆ ಆಗಿರುವ ಅನ್ಯಾಯದ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆದುದರಿಂದ ನೈಜ್ಯ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು. ಈಗಾಗಲೇ ಬಂಧನಕ್ಕೆ ಒಳಗಾಗಿ ಸುಳ್ಳುಪ್ರಮಾಣ ಪತ್ರ ತೋರಿಸಿ ಆಸ್ಪತ್ರೆಯಲ್ಲಿರುವ ಆರೋಪಿಯನ್ನು ಜೈಲಿಗೆ ಕಳುಹಿಸಬೇಕು. ಎಫ್‌ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಹಾಕಬೇಕು ಎಂದು ಒತ್ತಾಯಿಸಿದರು.

ಉಡುಪಿ ಜಿಲ್ಲಾ ಸಾಮಾಜಿಕ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಅಧ್ಯಕ್ಷ ಸದಾಶಿವ ಶೆಟ್ಟಿ, ಬಿಲ್ಲವ ಮುಖಂಡ ಸುಧಾಕರ್ ಡಿ.ಅಮೀನ್, ದಸಂಸ ಭೀಮವಾದ ಮುಖಂಡ ಶೇಖರ ಹಾವಂಜೆ, ಪ್ರಮೋದ್ ಉಚ್ಚಿಲ್, ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಮಾತನಾಡಿದರು.

ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್, ಯುವ ವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್, ಬಿಲ್ಲವ ಮುಖಂಡರಾದ ಬಾರಕೂರು ಸತೀಶ್ ಪೂಜಾರಿ, ವೈ.ಸುಧೀರ್ ಕುಮಾರ್, ಸದಾನಂದ ಅಮೀನ್, ಸಾವಿತ್ರಿ ಗಣೇಶ್, ಬೇಬಿ ಪೂಜಾರ್ತಿ, ಜ್ಯೋತಿ ಪೂಜಾರ್ತಿ, ಶಂಕರ ಶಾಂತಿ ತಾಯಿ ಬಾಬಿ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು. ದಯಾನಂದ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ:

ಆರ್‌ಟಿಐ ಕಾರ್ಯಕರ್ತನ ಮೇಲಿನ ಹಲ್ಲೆಯ ನಿಜವಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ದಸಂಸ ಭೀಮವಾದ ಮುಖಂಡ ಶೇಖರ ಹಾವಂಜೆ ಎಚ್ಚರಿಕೆ ನೀಡಿದರು. ಈ ಪ್ರಕರಣದಲ್ಲಿ ಪೊಲೀಸರಿಗೆ ರಾಜಕೀಯ ಒತ್ತಡ ಹೇರಿ ದಾರಿ ತಪ್ಪಿಸುವ ಕಾರ್ಯ ಮಾಡಲಾಗುತ್ತಿದೆ. ಆರೋಪಿಗಳಿಗೆ ರಾಜಕಾರಣಿಗಳು ಬೆಂಬಲ ನೀಡುತ್ತಿದ್ದಾರೆ. ಈ ಮೂಲಕ ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X