ದ.ಕ. ಜಿಲ್ಲೆಯಲ್ಲಿ 65 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಮಾ.15: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ ಮತ್ತೆ 65 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ನಡುವೆ 22 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 34,813 ಸೋಂಕಿತರ ಪೈಕಿ 33,770 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ 741 ಮಂದಿ ಮೃತಪಟ್ಟಿದ್ದು, 302 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





