Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಮನೆ ಬಹುಭಾಷಾ ನಾಟಕೋತ್ಸವ ಸಮಾರೋಪ:...

ರಂಗಮನೆ ಬಹುಭಾಷಾ ನಾಟಕೋತ್ಸವ ಸಮಾರೋಪ: ಮುಖ್ಯಮಂತ್ರಿ ಚಂದ್ರು ಅವರಿಗೆ ರಂಗಮನೆ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 March 2021 11:20 PM IST
share
ರಂಗಮನೆ ಬಹುಭಾಷಾ ನಾಟಕೋತ್ಸವ ಸಮಾರೋಪ: ಮುಖ್ಯಮಂತ್ರಿ ಚಂದ್ರು ಅವರಿಗೆ ರಂಗಮನೆ ಪ್ರಶಸ್ತಿ ಪ್ರದಾನ

ಸುಳ್ಯ: ವೃತ್ತಿ ರಂಗಭೂಮಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಹವ್ಯಾಸಿ ರಂಗಭೂಮಿಯಲ್ಲಿ ವೃತ್ತಿ ಧರ್ಮವನ್ನು ಇಟ್ಟುಕೊಂಡು ಬೆಳೆಸುತ್ತಿರುವ ಜೀವನ್‍ರಾಂ ರಾಜ್ಯಕ್ಕೇ ಮಾದರಿಯಾದ ಕಾರ್ಯ ಮಾಡುತ್ತಿದ್ದಾರೆ. ಇಂತಹ ಕೆಲಸಗಳಿಗೆ ಸರಕಾರ ಆರ್ಥಿಕ ಭದ್ರತೆ ನೀಡಿ ಬೆಳೆಸಬೇಕು ಎಂದು ರಂಗಭೂಮಿ ಮತ್ತು ಚಲನಚಿತ್ರದ ಹಿರಿಯ ನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಹೇಳಿದರು.

ಸುಳ್ಯದ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಬಹುಭಾಷಾ ನಾಟಕೋತ್ಸವ  ಸಮಾರೋಪದಲ್ಲಿ 2021 ನೇ ಸಾಲಿನ ರಂಗ ಮನೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು, ರಂಗ ಚಟುವಟಿಕೆ ಕೇಂದ್ರಗಳು ಮತ್ತು ಕಲಾವಿದರು ಸಂಕಷ್ಟದಲ್ಲಿದ್ದಾರೆ. ರಂಗಭೂಮಿ ನಶಿಸುತ್ತಿರುವ ಈ ಸಂದರ್ಭದಲ್ಲಿ ಸರಕಾರ ಹೆಚ್ಚಿನ ಅನುದಾನ ನೀಡಿ ಕಲೆ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. 

ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಮೀನುಗಾರಿಕಾ ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ವಹಿಸಿ ಮಾತನಾಡಿ ಕಲೆ ಮತ್ತು ಸಂಸ್ಕೃತಿಗಳು ಒಂದು ಸಮಾಜವನ್ನು ಜೀವಂತವಾಗಿರಿಸುತ್ತದೆ. ಸಮಾಜ ಗುರುತಿಸುವ ರೀತಿಯಲ್ಲಿ ವ್ಯಕ್ತಿಗಳು ಬೆಳೆಯಬೇಕು. ಕಲೆ ಸಂಸ್ಕೃತಿ ಮತ್ತು ಕಲಾವಿದರ ಮೂಲಕ ಸಮಾಜ ಬೆಳಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಪ್ರಸಿದ್ಧ ರಂಗನಿರ್ದೇಶಕ ಡಾ. ಬಿ.ವಿ.ರಾಜಾರಾಂ ಸಮಾರೋಪ ಭಾಷಣ ಮಾಡಿ, ರಾಜ್ಯದ ರಂಗಭೂಮಿ ಜಗತ್ತಿನಲ್ಲಿ ಮಹತ್ವದ ಸ್ಥಾನ ಪಡೆದ ರಂಗಾಯಣ, ನೀನಾಸಂ ನಂತೆ ರಂಗಮನೆಯೂ ಸ್ಥಾನ ಪಡೆಯುತ್ತದೆ ಎಂದು ಶ್ಲಾಘಿಸಿದರು

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಪ್ರಶಸ್ತಿ ಪ್ರದಾನ ಮಾಡಿದರು. ಕವಿ ಸುಬ್ರಾಯ ಚೊಕ್ಕಾಡಿ ಶುಭಾಶಂಸನೆ ಮಾಡಿದರು. ರಂಗ ಮನೆಯ ರೂವಾರಿ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಡಾ. ಸುಂದರ್ ಕೇನಾಜೆ ಸನ್ಮಾನ ಪತ್ರ ವಾಚಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು. ಡಾ. ವಿದ್ಯಾ ಶಾರದೆ ವಂದಿಸಿದರು. ಪದ್ಮಾ ಚಂದ್ರು, ಸುಜನಾ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕಲಾಗಂಗೋತ್ರಿ ಬೆಂಗಳೂರು ಅಭಿನಯದ ಮುಖ್ಯಮಂತ್ರಿ ನಾಟಕದ 730 ನೇ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X