ಲೋಕಸಭೆಯಲ್ಲಿ ಬಾಲ ನ್ಯಾಯ ಕಾಯ್ದೆಯ ತಿದ್ದುಪಡಿ ಮಸೂದೆ ಮಂಡನೆ
ಹೊಸದಿಲ್ಲಿ, ಮಾ. 15: ಜಿಲ್ಲಾ ದಂಡಾಧಿಕಾರಿಗಳು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳ ಪಾತ್ರವನ್ನು ಹೆಚ್ಚಿಸುವ ಬಾಲನ್ಯಾಯ (ಮಕ್ಕಳ ಆರೈಕೆ ಹಾಗೂ ರಕ್ಷಣೆ) ಕಾಯ್ದೆ-2015ರ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಮಸೂದೆಯ ಪ್ರಸ್ತಾವನೆ ಸಂದರ್ಭ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರೋಧ ವ್ಯಕ್ತಪಡಿಸಿದರು. ಆದರೆ, ಅವರು ಎತ್ತಿದ ಅಂಶಗಳನ್ನು ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ತಿರಸ್ಕರಿಸಿದರು. ಅನಂತರ ಬಾಲ ನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ ತಿದ್ದುಪಡಿ ಮಸೂದೆ 2021 ಅನ್ನು ಧ್ವನಿ ಮತದ ಮೂಲಕ ಮಂಡಿಸಲಾಯಿತು. ಸಂಪುಟದ ನಿರ್ಧಾರದಂತೆ, ಪ್ರತಿ ಜಿಲ್ಲೆ, ಜಿಲ್ಲಾ ದಂಡಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಈ ಕಾಯ್ದೆಯ ಅನುಷ್ಠಾನದ ಜವಾಬ್ದಾರಿ ವಹಿಸಿಕೊಂಡ ಸಂಸ್ಥೆಗಳ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸುವ ಅಧಿಕಾರವನ್ನು ಹೊಂದಲಿದ್ದಾರೆ. ಜಿಲ್ಲಾ ದಂಡಾಧಿಕಾರಿ ಅವರ ಅಧಿಕಾರ ವ್ಯಾಪ್ತಿಯಲ್ಲಿ ಈ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯ ನಿರ್ವಹಿಸಲಿದೆ.
Next Story





