Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನದಿ ಒಳಹರಿವು ಆಧರಿಸಿ ಕುಡಿಯುವ ನೀರು...

ನದಿ ಒಳಹರಿವು ಆಧರಿಸಿ ಕುಡಿಯುವ ನೀರು ಸರಬರಾಜು: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ16 March 2021 11:16 PM IST
share
ನದಿ ಒಳಹರಿವು ಆಧರಿಸಿ ಕುಡಿಯುವ ನೀರು ಸರಬರಾಜು: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಮಾ.16: ನದಿ ನೀರಿನ ಒಳ ಹರಿವಿನ ಲಭ್ಯತೆಯನ್ನು ಆಧರಿಸಿ ಕುಡಿಯುವ ನೀರಿನ ಸರಬರಾಜನ್ನು ಅಗತ್ಯ ಎಚ್ಚರಿಕಾ ಕ್ರಮ ಗಳನ್ನು ಕೈಗೊಂಡು ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಕುರಿತ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಬೇಸಿಗೆಯಿಂದಾಗಿ ನದಿಯ ನೀರಿನ ಮೂಲಗಳು ಬತ್ತುವುದರೊಂದಿಗೆ ನದಿಯಲ್ಲಿ ನೀರಿನ ಹರಿವು ದಿನೇದಿನೇ ಕ್ಷೀಣಿಸುತ್ತಿದೆ. ಸಾಮಾನ್ಯವಾಗಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳು ನದಿಯ ನೀರು ಆಧಾರವಾಗಿದ್ದು, ಮುಂದಿನ ಮಾನ್ಸೂನ್ ಮಳೆ ಪ್ರಾರಂಭದವರೆಗೆ ಲಭ್ಯತೆ ಯನ್ನು ಆಧರಿಸಿ ಕುಡಿಯುವ ನೀರಿನ ಸರಬರಾಜನ್ನು ಮಾಡಬೇಕೆಂದು ಸೂಚನೆ ನೀಡಿದರು. ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಜನಸಾಮಾನ್ಯರಿಗೆ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಕುಡಿಯುವ ನೀರು ಸರಬರಾಜು ಕೊಳವೆಗಳಲ್ಲಿ ಆಗುತ್ತಿರುವ ಸೋರಿಕೆಯ ದುರಸ್ತಿ ಕಾರ್ಯಗಳನ್ನು ತಕ್ಷಣದಲ್ಲಿಯೇ ಕೈಗೊಳ್ಳಬೇಕು. ನಲ್ಲಿ ನೀರಿನ ಪೈಪ್‌ಗಳಿಗೆ ನೇರವಾಗಿ ಕೆಲವರು ಪಂಪ್‌ಗಳನ್ನು ಅಳವಡಿಸಿ ನೀರನ್ನು ಸೆಳೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆಯೂ ಸಹ ಎಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳಬೇಕು ಎಂದರು.

ನದಿಯ ನೀರಿನ ಲಭ್ಯತೆ ಅಲ್ಲದೆ ಇತರ ನೀರಿನ ಮೂಲಗಳನ್ನು ಗುರುತಿಸಿ ಅವುಗಳ ಬಳಕೆಗೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ನೀರಿನ ಲಭ್ಯತೆಯ ಪ್ರಮಾಣ ಅವುಗಳ ಸರಬರಾಜಿನ ಮೇಲ್ವಿಚಾರಣೆ ನಡೆಸಲು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.

ನದಿ ಪಾತ್ರದ ಅಕ್ಕಪಕ್ಕದ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ಅನಧಿಕೃತ ಪಂಪು ಸೆಟ್‌ಗಳನ್ನು ತೆರವುಗೊಳಿಸಲು ಮೆಸ್ಕಾಂ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್, ಪ್ರೊಬೇಶನರಿ ಐ.ಎ.ಎಸ್. ಅಧಿಕಾರಿ ಮೋನಾ ರೋತ್ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

‘ವಾಣಿಜ್ಯ ಬಳಕೆಗೆ ನೀರು ಸ್ಥಗಿತ’

ಸಾರ್ವಜನಿಕರು ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಲು ಅರಿವು ಮೂಡಿಸುವುದರೊಂದಿಗೆ ಕಡಿಮೆ ಪ್ರಮಾಣದಲ್ಲಿ ಬಳಸುವಂತೆ ಮನವರಿಕೆ ಮಾಡಿಕೊಡಬೇಕು. ವಾಣಿಜ್ಯ ಬಳಕೆಗೆ ಸಂಪರ್ಕ ನೀಡಿರುವ ನಲ್ಲಿ ನೀರಿನ ಸೌಲಭ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X