Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರಕ್ಷತಾ ಸಂಚಾರಕ್ಕೆ ಮುಂಜಾಗ್ರತಾ ಕ್ರಮ...

ಸುರಕ್ಷತಾ ಸಂಚಾರಕ್ಕೆ ಮುಂಜಾಗ್ರತಾ ಕ್ರಮ ವಹಿಸಿ: ಎಸ್ಪಿ

ದ.ಕ. ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ17 March 2021 8:24 PM IST
share
ಸುರಕ್ಷತಾ ಸಂಚಾರಕ್ಕೆ ಮುಂಜಾಗ್ರತಾ ಕ್ರಮ ವಹಿಸಿ: ಎಸ್ಪಿ

ಮಂಗಳೂರು, ಮಾ.17: ಸಾರ್ವಜನಿಕರ ಸುಗಮ ಹಾಗೂ ಸುರಕ್ಷತಾ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಿರ್ಭೀತರಾಗಿ ಸಂಚರಿಸಲು ಅನುವು ಮಾಡಬೇಕು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮೀ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿರುವುದರ ಜೊತೆಗೆ ವಾಹನ ಚಾಲಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದೇ ಇರುವುದರಿಂದ ಅಪಘಾತ ಪ್ರಮಾಣ ದಿನೇದಿನೇ ಹೆಚ್ಚುತ್ತಿದೆ. ಹೀಗಾಗಿ ಇವುಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಸಂಚಾರ ಸುರಕ್ಷಿತ ನಿಯಮಗಳನ್ನು ಚಾಚುತಪ್ಪದೇ ಪಾಲಿಸಬೇಕು ಎಂದರು.

ಸಾರ್ವಜನಿಕ ರಸ್ತೆಗಳು ವಾಹನಗಳ ಸಂಚಾರಕ್ಕೆ ಸುಗಮವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಳೆದ 3-4 ವರ್ಷಗಳಲ್ಲಿ ಹೆಚ್ಚು ಅಪಘಾತವಾಗಿರುವ ಸ್ಥಳಗಳನ್ನು ಗುರುತಿಸಿ ಅಪಘಾತ ರಹಿತ ಸ್ಥಳಗಳನ್ನಾಗಿಸಲು ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸುವುದರ ಜೊತೆಗೆ ಅಪಘಾತ ವಲಯ ಪ್ರದೇಶವೆಂದು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದರು.

ಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಅಳವಡಿಸಿ ವಾಹನದ ವೇಗದ ಮಿತಿಯನ್ನು ಕಂಡು ಹಿಡಿಯುವುದರೊಂದಿಗೆ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ದಂಡ ವಿಧಿಸಲು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

ನಗರ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದ ಸ್ಥಳಗಳಲ್ಲಿ ಆಟೋರಿಕ್ಷಾಗಳ ತಂಗುದಾಣ, ಬಸ್ ಬೇಗಳನ್ನು ನಿರ್ಮಿಸಲು ಗುರುತಿಸಲಾಗಿರುವ ಜಾಗದಲ್ಲಿ ಸ್ಮಾರ್ಟ್‌ಸಿಟಿ ಅಡಿಯಲ್ಲಿ ಅವುಗಳನ್ನು ನಿರ್ಮಾಣ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ರಸ್ತೆ ಅಗಲೀಕರಣ ಮತ್ತು ಕಾಂಕ್ರಿಟೀಕರಣ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ರಸ್ತೆ ಅಪಘಾತಗಳು ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣ ಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಸಾಮಾನ್ಯ ರಸ್ತೆಗಳಲ್ಲಿ ರಸ್ತೆ ವಿಭಜಕಗಳನ್ನು ನಿರ್ಮಿಸಬೇಕು. ಪಾದಚಾರಿಗಳು ರಸ್ತೆದಾಟಲು ಬಳಸುವ ಝೀಬ್ರಾ ಕ್ರಾಸಿಂಗ್‌ಗಳಿಗೆ ಬಣ್ಣ ಬಳಿಯುವುದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ರಸ್ತೆ ಸುರಕ್ಷತಾ ಮಾಸಾಚರಣೆ ಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರು.

ಮಂಗಳೂರಿನ ಮಣ್ಣಗುಡ್ಡ ಮತ್ತು ನಂತೂರಿನಲ್ಲಿ ವಾರಸುದಾರರಿಲ್ಲದ ವಾಹನಗಳು ರಸ್ತೆಯ ಬದಿಯಲ್ಲಿ ನಿಂತಿರುವುದು ಕಂಡು ಬಂದಿದೆ. ಆ ವಾಹನಗಳನ್ನು ಅದಷ್ಟು ಬೇಗ ತೆರವುಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವರ್ಣೇಕರ್, ಪುತ್ತೂರು ವಿಭಾಗೀಯ ಕೆಎಸ್ಸಾರ್ಟಿಸಿ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಮಂಗಳೂರು ವಿಭಾಗೀಯ ಕೆಎಸ್ಸಾರ್ಟಿಸಿ ನಿಯಂತ್ರಣಾಧಿಕಾರಿ ಕಮಲ್‌ಕುಮಾರ್ ಎಚ್.ಆರ್ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎನ್‌ಎಂಪಿಟಿಯಲ್ಲಿ ವಾಹನ ತಪಾಸಣೆ

ನವ ಮಂಗಳೂರು ಬಂದರಿನಿಂದ ಪ್ರತಿದಿನ ಅಧಿಕ ಭಾರದ ವಾಹನಗಳು ಸಂಚರಿಸುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ಅಡ್ಡಿಯಾಗುವುದಲ್ಲದೇ ವಾಹನ ದಟ್ಟಣೆಯಾಗುತ್ತದೆ. ವಾಹನಗಳ ಸಂಚಾರದ ಸಮಯವನ್ನು ನಿಗದಿಪಡಿ ಸಬೇಕು. ಭಾರೀ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮೀ ಪ್ರಸಾದ್ ತಿಳಿಸಿದರು.

ಬಸ್‌ಗೆ ವೇಗಮಿತಿ ಅಳವಡಿಕೆ

ಮಂಗಳೂರು ನಗರ ಪ್ರದೇಶದ ಒಳಗೆ ಹಾಗೂ ಗ್ರಾಮೀಣ ಭಾಗಕ್ಕೆ ಸಂಚರಿಸುವ ಖಾಸಗಿ ಹಾಗೂ ಕೆಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಪಘಾತ ಸಂಭವಿಸುತ್ತಿರುವುದು ಕಂಡುಬರುತ್ತಿದೆ. ಬಸ್‌ಗಳಲ್ಲಿ ಸರಿಯಾದ ವೇಗದ ಮಿತಿಯನ್ನು ಅಳವಡಿಸದೇ ಇರುವುದರಿಂದ ಬಸ್‌ಗಳು ಅತಿ ವೇಗವಾಗಿ ಸಂಚರಿಸಿ ಅಪಘಾತಗಳು ನಡೆಯುತ್ತಿವೆ. ಇಂತಹ ಬಸ್‌ಗಳ ಸಂಚಾರವನ್ನು ನಿಲ್ಲಿಸುವಂತೆ ಅಧಿಕಾರಿ ಗಳು ಕಾರ್ಯಪ್ರವೃತರಾಗಬೇಕು ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X