Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರತ್ನಾಕರವರ್ಣಿಯ ಸಾಹಿತ್ಯ ಹೊಸ ತಲೆಮಾರಿಗೆ...

ರತ್ನಾಕರವರ್ಣಿಯ ಸಾಹಿತ್ಯ ಹೊಸ ತಲೆಮಾರಿಗೆ ಪರಿಚಯಿಸ‌ಬೇಕಾಗಿದೆ : ಪ್ರೊ. ಪಿ ಎಸ್‌ ಯಡಪಡಿತ್ತಾಯ

ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ17 March 2021 9:46 PM IST
share
ರತ್ನಾಕರವರ್ಣಿಯ ಸಾಹಿತ್ಯ ಹೊಸ ತಲೆಮಾರಿಗೆ ಪರಿಚಯಿಸ‌ಬೇಕಾಗಿದೆ : ಪ್ರೊ. ಪಿ ಎಸ್‌ ಯಡಪಡಿತ್ತಾಯ

ಮಂಗಳೂರು, ಮಾ.17:ರತ್ನಾಕರವರ್ಣಿಯ ಸಾಹಿತ್ಯ ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ. ರತ್ನಾಕರವರ್ಣಿ ಜೈನ ಸಮುದಾಯಕ್ಕೆ ಸೀಮಿತವಾದ ಕವಿಯಲ್ಲ, ಆತ ವಿಶ್ವಕವಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಎಸ್‌ ಯಡಪಡಿತ್ತಾಯ ಅಭಿಪ್ರಾಯ ಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗಗಳು ಜಂಟಿಯಾಗಿ  ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿಂದು ಆಯೋಜಿಸಿದ್ದ ʼರತ್ನಾಕರವರ್ಣಿಯ ಶತಕಗಳು- ಒಂದು ಅವಲೋಕನʼ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

 “ರತ್ನಾಕರವರ್ಣಿ ಸಂಪ್ರದಾಯಗಳಿಗೆ ಶರಣಾಗದ ವಿಮರ್ಶಾತ್ಮಕ ಮ ನೋಭಾವದವನು. ಮಡಿವಂತಿಕೆಯಿಲ್ಲದಿದ್ದರೂ ಎಲ್ಲದರಲ್ಲೂ ಇತಿಮಿತಿಯಿರಲಿ ಎಂದವನು. ಆತನ ʼಭರತೇಶ ವೈಭವʼ ಹಲವು ಭಾಷೆಗಳಿಗೆ ಭಾಷಾಂತರವಾಗಿರುವುದು ನಮ್ಮ ಹೆಮ್ಮೆ,” ಎಂದರು.

ಆಶಯ ನುಡಿಗಳನ್ನಾಡಿದ ಮೂಡಬಿದ್ರೆಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಜಿತ್‌ ಪ್ರಸಾದ್‌, ರತ್ನಾಕರವರ್ಣಿಯ ʼಭರತೇಶ ವೈಭವʼ ಮತ್ತು ಶತಕಗಳನ್ನು ಓದದೆ ಆತನನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಆತ ಬದುಕನ್ನು ಅದ್ಭುತವಾಗಿ ಅನುಭ ವಿಸಿದರೂ ಯೋಗಿಯಾಗಿದ್ದ, ಮೋಕ್ಷಕ್ಕೆ ಹಂಬಲಿಸಿದ್ದ, ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರತ್ನಾಕರವರ್ಣಿ ಅಧ್ಯಯನ ಪೀಠದ ಸಂಯೋಜಕ ಪ್ರೊ. ಸೋಮಣ್ಣ, ಅಧ್ಯಯನ ಪೀಠವು ಹೊರರಾಜ್ಯಗಳಲ್ಲಿ, ಜಿಲ್ಲೆಗಳಲ್ಲಿಯೂ ರತ್ನಾಕರವರ್ಣಿಯ ಶಾಂತಿ ಸಂದೇಶ ಹರಡುವ ಕೆಲಸ ಮಾಡುತ್ತಿದೆ ಎಂದರು.

ಮೈಸೂರಿನ ಆಚಾರ್ಯ ವಿಷನ್‌ ಗುರುಕುಲ ಎಡು ಸರ್ವಿಸ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಎಚ್‌.ಪಿ ಮೋಹನ ಕುಮಾರ, ರತ್ನಾಕರವರ್ಣಿಯ ತ್ರಿಲೋಕ ಶತಕ ಜೈನಾಗಮನದ, ಮೂರು ಲೋಕಗಳ ಕಲ್ಪನೆಯನ್ನು ಒದಗಿಸುತ್ತದೆ ಎಂದರು.

ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ಕುಲಸಚಿವ ಡಾ. ಬಿ ಪಿ ಸಂಪತ್‌ ಕುಮಾರ್‌, ರತ್ನಾಕರವರ್ಣಿ ಎಲ್ಲೂ ಪರಮತ ಖಂಡನೆ ಮಾಡಿಲ್ಲ. ʼರತ್ನಾಕರಾಧೀಶ್ವರ ಶತಕʼ ದಲ್ಲಿ ಮಾನವ ಜನ್ಮದ ಸಾರವನ್ನು ಅತ್ಯಂತ ಸರಳವಾಗಿ ತಿಳಿಸಲಾಗಿದೆ ಎಂದರು.

ಅಪರಾಜಿತೇಶ್ವರ ಶತಕದ ಕುರಿತು ವಿಚಾರ ಮಂಡಿಸಿದ ಬೆಂಗಳೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ, ರತ್ನಾಕರವರ್ಣಿಯ ಶತಕಗಳಲ್ಲಿ ಕಾಣದ ಛಾಯೆಯಿದೆ. ಅರಿಯುವುದು ಕಠಿಣವಾದರೂ ಶತಕಗಳನ್ನು ಅರ್ಥಮಾಡಿ ಕೊಂಡವರಿಗೆ ಲಾಭವಿದೆ, ಎಂದರು. ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ ಎ ಹರೀಶ, ರತ್ನಾಕರವರ್ಣಿ ಶಾಂತಿ ಪಸರಿಸಿದ ಕವಿ ಎಂದರು.

ನಿರೀಕ್ಷಾ ಜೈನ್‌ ಹೊಸ್ಮಾರ್‌ ಮತ್ತು ಅತ್ತೂರು ಸುರೇಶ್‌ ರಾವ್‌ ಅವರ ರತ್ನಾಕರನ ಹಾಡುಗಳ ಹಾಡುಗಾರಿಕೆ ಗಮನ ಸೆಳೆಯಿತು. ಸಮಾನಂತರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆಯಿತ್ತು. ವಿವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ  ಎಂ.ಕೆ ಅತಿಥಿಗಳನ್ನು ಸ್ವಾಗತಿಸಿದರು.  ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ, ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಪ್ರಕಾಶ್ಚಂದ್ರ ಶಿಶಿಲ ಕವಿಯ ಬಗ್ಗೆ ನಾವೆಲ್ಲರೂ ಇನ್ನಷ್ಟು ತಿಳಿಯುವುದಿದೆ ಎಂದರು. ಕಾರ್ಯಕ್ರಮ, ವಿದ್ಯಾರ್ಥಿಗಳ ಪಾಲ್ಗೊಳ್ಳವಿಕೆಯನ್ನು ಕೊಂಡಾಡಿದರು.

ಡಾ. ಶೈಲಾ ಯು, ವಿ. ವೆಂಕಟೇಶ್‌, ನಾಗೇಶ್‌ ನಾಯಕ್‌, ಉಷಾ, ಡಾ. ಅಶ್ವಿನಿ ನಾಯಕ್‌ ಮೊದಲಾದವರ  ಕಾರ್ಯಕ್ರಮ ನಿರ್ವಹಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X