ಪುತ್ತೂರು: ಉಪವಿಭಾಗ ಮಟ್ಟದ ಪೊಲೀಸ್ ಕುಟುಂಬ ಸಮ್ಮಿಲನ

ಪುತ್ತೂರು: ಸಮಾಜದ ಸ್ವಾಸ್ತ್ಯ ಕಾಪಾಡಲು ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗಾಗಿ ಮತ್ತು ಅವರ ಕುಟುಂಬದ ಸಂತೋಷಕ್ಕಾಗಿ ದ.ಕ.ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಉಪವಿಭಾಗ ಮಟ್ಟದಲ್ಲಿ ಆಯೋಜಿಸಲಾದ ಪೊಲೀಸ್ ಕುಟುಂಬ ಸಮ್ಮಿಲನ ಕಾರ್ಯಕ್ರಮ ಬುಧವಾರ ಸಂಜೆ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪವಿಭಾಗದ ಡಿವೈಎಸ್‍ಪಿ ಡಾ. ಗಾನ ಪಿ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪುತ್ತೂರು ನಗರ, ಪುತ್ತೂರು ಸಂಚಾರ, ಮಹಿಳಾ, ಉಪ್ಪಿನಂಗಡಿ, ಕಡಬ ಮತ್ತು ಡಿವೈಎಸ್‍ಪಿ ಕಚೇರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅವರ ಕುಟುಂಬಸ್ಥರು ಕುಟುಂಬ ಸಮ್ಮಿಲನದಲ್ಲಿ ಪಾಲ್ಗೊಂಡರು.
ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಗೋಪಾಲ್ ನಾಯ್ಕ್, ಎಸ್‍ಐ ಜಂಬೂರಾಜ್ ಮಹಾಜನ್, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಉಪ್ಪಿನಂಗಡಿ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಗೆ, ಕಡಬ ಎಸ್‍ಐ ರುಕ್ಮನಾಯ್ಕ್, ಸಂಪ್ಯ ಎಸ್‍ಐ ಉದಯ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕುಟುಂಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆ ನಡೆಯಿತು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಸ್ಪರ್ಧೆಗಳನ್ನು ನಡೆಸಿಕೊಟ್ಟರು.







