Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದನ, ಕರುಗಳನ್ನು ಪೂಜೆ ಮಾಡಲು ನಾವು, ಹೆಣ...

ದನ, ಕರುಗಳನ್ನು ಪೂಜೆ ಮಾಡಲು ನಾವು, ಹೆಣ ಹೊರಲು ಹೊಲೆಯರು; ಇದೆಂಥಾ ಪದ್ಧತಿ?: ರಮೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ18 March 2021 8:44 PM IST
share
ದನ, ಕರುಗಳನ್ನು ಪೂಜೆ ಮಾಡಲು ನಾವು, ಹೆಣ ಹೊರಲು ಹೊಲೆಯರು; ಇದೆಂಥಾ ಪದ್ಧತಿ?: ರಮೇಶ್ ಕುಮಾರ್

ಬೆಂಗಳೂರು, ಮಾ.18: ಊರುಗಳಲ್ಲಿ ದನ, ಕರುಗಳು ಸತ್ತು ಹೋದರೆ ಅವುಗಳ ಹೆಣ ಹೊರಲು ಬ್ರಾಹ್ಮಣರು ಬರುತ್ತಾರೋ? ಇಲ್ಲ. ನಾವು ಯಾರನ್ನು ಊರಿನ ಹೊರಗೆ ಹೊಲಗೇರಿಯಲ್ಲಿ ಇಟ್ಟಿದ್ದೀವೋ ಅವರೇ ಬರಬೇಕು. ಪೂಜೆ ಮಾಡಲು ನಾವು, ಸತ್ತು ಹೋದರೆ ಅದನ್ನು ಹೊರಕ್ಕೆ ತೆಗೆದುಕೊಂಡು ಹೋಗಲು ಅವರು ಬರಬೇಕು. ಇದು ಎಂತಹ ಪದ್ಧತಿ ಎಂದು ಕಾಂಗ್ರೆಸ್ ಸದಸ್ಯ ಕೆ.ಆರ್.ರಮೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಲ ಹೊರುವುದನ್ನು ದಲಿತರು ಬಿಟ್ಟು ಬೇರೆ ಯಾರಾದರೂ ಮಾಡುತ್ತಾರೆಯೇ? ಅದೇ ರೀತಿ ಐತಿಹಾಸಿಕವಾಗಿ ದನ ಅವರ ಆಹಾರದ ಪದ್ಧತಿಯಾಗಿದೆ. ಪೂಜೆಗೆ ನಾವು ಎದುರು ಬರಲ್ಲ. ಆದರೆ, ರೈತನಿಗೆ ಆರ್ಥಿಕವಾಗಿ ಹೊರೆಯಾಗುವುದು, ಕೃಷಿಗೆ ಅನುಪಯುಕ್ತವಾಗುವ ಸಂದರ್ಭದಲ್ಲಿ ಸರಕಾರಕ್ಕೆ ಸ್ಪಷ್ಟನೆ ಇರಬೇಕು ಎಂದರು.

ಇವತ್ತು ಇಡೀ ಜಗತ್ತು ಒಂದು ಕಡೆ ಇಸ್ಲಾಮಿಕ್ ಹಾಗೂ ಕ್ರೈಸ್ತ ಜಗತ್ತು ಎಂದು ಕರೆಯಲ್ಪಡುತ್ತದೆ. ಇಸ್ಲಾಮಿಕ್ ಜಗತ್ತಿನಲ್ಲಿ ಹಂದಿ ಮಾಂಸ ನಿಷಿದ್ಧ. ಆದರೆ, ಕ್ರೈಸ್ತ ಜಗತ್ತಿನಲ್ಲಿ ಹಂದಿ ಹಾಗೂ ಬೀಫ್ ಎರಡನ್ನು ತಿನ್ನುತ್ತಾರೆ. ನಾವು ಪ್ರತಿಯೊಂದು ಜಿಲ್ಲೆಯಲ್ಲಿ ಯಾಂತ್ರೀಕೃತ ಕಸಾಯಿಖಾನೆಗಳನ್ನು ಮಾಡಿ, ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಮಾಂಸವನ್ನು ರಫ್ತು ಮಾಡಿದರೆ ನಮ್ಮ ರೈತರಿಗೆ ಅನುಕೂಲವಾಗುವುದಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ನಮ್ಮವರಿಗೆ ಏನು ಮಾಡಲು ಬರದಿದ್ದರೂ ಹಂದಿ, ಕುರಿ, ಮೇಕೆ ಸಾಕಲು ಬರುತ್ತದೆ. ಪಶುಸಂಗೋಪನೆ ಇಲಾಖೆ ಯಾಕೆ ಇಂತಹ ಯಾಂತ್ರೀಕೃತ ಕಸಾಯಿಖಾನೆಗಳನ್ನು ಮಾಡಿ, ಮಾಂಸ ರಫ್ತು ಮಾಡುವ ಬಗ್ಗೆ ಆಲೋಚನೆ ಮಾಡಬಾರದು. ಸರಕಾರ ಇಂತಹ ಕೆಲಸಕ್ಕೆ ಅಗತ್ಯವಿರುವ ಸಾಲ ಸೌಲಭ್ಯ ಕೊಡಲಿ ಎಂದು ರಮೇಶ್ ಕುಮಾರ್ ಹೇಳಿದರು.

ರೈತರು ಹುತಾತ್ಮರು: ಪಂಜಾಬ್ ಗಡಿಭಾಗದಲ್ಲಿ ಕಳೆದ 111 ದಿನಗಳಿಂದ ಹೋರಾಟ ಮಾಡುತ್ತಿರುವ ರೈತರಲ್ಲಿ, ಸುಮಾರು 200 ಜನ ಮೃತಪಟ್ಟಿದ್ದಾರೆ. ಅವರನ್ನು ನಾನು ಹುತಾತ್ಮರು ಎಂದು ಕರೆಯುತ್ತೇನೆ. ಒಂದು ಸದನವಾಗಿ ನಾವು ಅವರನ್ನು ನೆನಪು ಮಾಡಿಕೊಳ್ಳದಿದ್ದರೆ ಅಪರಾಧವಾಗುತ್ತದೆ. ‘ಅಚ್ಛೇದಿನ್ ಆಯೇಂಗೆ’ ಎಂಬ ಭರವಸೆಯಲ್ಲಿ ನಾವಿದ್ದೇವೆ ಎಂದು ರಮೇಶ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X