ದ.ಕ. ಜಿಲ್ಲೆಯಲ್ಲಿ ಗುರುವಾರ 64 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಮಾ.18: ದ.ಕ. ಜಿಲ್ಲೆಯಲ್ಲಿ ಗುರುವಾರ 64 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 14 ಮಂದಿ ಗುಣಮುಖರಾಗಿದ್ದಾಾರೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 34,999ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 33,830 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ.
ಜಿಲ್ಲಿಯಲ್ಲಿ ಒಟ್ಟು 741 ಮಂದಿ ಮೃತಪಟ್ಟಿದ್ದು, ಪ್ರಸ್ತುತ 428 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 36,648 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 37,72,910 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್ ತಿಳಿಸಿದೆ.
Next Story





