Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆಯಾದ...

‘ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆಯಾದ ವಿದ್ಯಾರ್ಥಿಯನ್ನು ಭೇಟಿ ಮಾಡಿದ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ19 March 2021 8:31 PM IST
share
‘ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆಯಾದ ವಿದ್ಯಾರ್ಥಿಯನ್ನು ಭೇಟಿ ಮಾಡಿದ ಸುರೇಶ್ ಕುಮಾರ್

ಬೆಂಗಳೂರು, ಮಾ.19: ಹೊಸದಿಲ್ಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜತೆ ನಡೆಯುವ ‘ಪರೀಕ್ಷಾ ಪೇ ಚರ್ಚಾ’ ಸಂವಾದಕ್ಕೆ ಆಯ್ಕೆಯಾಗಿರುವ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಹೊಸಕೋಟೆ ತಾಲೂಕಿನ ತಾವರೆಕೆರೆ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿ ಮನೋಜ್‍ನನ್ನು ಅಭಿನಂದಿಸಿದ ಸುರೇಶ್ ಕುಮಾರ್, ಪ್ರಧಾನಿಯವರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಬೇಕೆಂದು ಸಲಹೆ ನೀಡಿದರು.

ಕೊನೆಯಲ್ಲಿ ಎಲ್ಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸುರೇಶ್ ಕುಮಾರ್, ಪರೀಕ್ಷೆ, ಶಾಲೆ, ತರಗತಿ, ಪಠ್ಯ, ಆರೋಗ್ಯ ರಕ್ಷಣೆ, ಸಾಂಕ್ರಾಮಿಕ ರೋಗಗಳಿಂದ ದೂರ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ ಪರೀಕ್ಷೆಗೆ ಚೆನ್ನಾಗಿ ಅಭ್ಯಾಸ ಮಾಡಬೇಕು ಎಂದರು.

ಅನುಷಾಳೊಂದಿಗೆ ದೂರವಾಣಿಯಲ್ಲಿ ಸಂವಾದ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಚಾರಮಕ್ಕಿ ನಾರಾಯಣಶೆಟ್ಟಿ ಸ್ಮಾರಕ ಆರ್ಡಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಅನುಷಾ ಕೃಷ್ಣ ಕುಳಾಲ್‍ರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸುರೇಶ್ ಕುಮಾರ್, ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯ ಕುಟುಂಬ, ತಂದೆ-ತಾಯಿ ಕುರಿತು ವಿವರ ತಿಳಿದುಕೊಂಡರು.

ಪ್ರಧಾನಿಯೊಂದಿಗೆ ಸಂವಾದಕ್ಕೆ ನೀವು ಆಯ್ಕೆಯಾಗಿರುವುದು ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ನೀವು ಮುಂದೆಯೂ ಚೆನ್ನಾಗಿ ಓದಿ ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಬೇಕು. ಇಡೀ ರಾಜ್ಯದ ಪರವಾಗಿ ತಮಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವೆ ಎಂದು ಸುರೇಶ್ ಕುಮಾರ್ ಹೇಳಿದರು.

ಇಬ್ಬರು ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಕಳೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.98 ಅಂಕ ಪಡೆದ ಯಾದಗಿರಿ ಮೂಲದ ವಲಸೆ ವಿದ್ಯಾರ್ಥಿಯೊಬ್ಬನ ಗುಡಿಸಲಿಗೆ ಭೇಟಿ ನೀಡಿದ ಪ್ರಸಂಗವನ್ನು ವಿವರಿಸಿ ಕಟ್ಟಡ ಕಾರ್ಮಿಕನಾದ ವಿದ್ಯಾರ್ಥಿ ಆ ಸ್ಥಿತಿಯಲ್ಲೂ ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಗಳಿಸಿರುವುದು ಆತನ ಛಲವನ್ನು ಬಿಂಬಿಸಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳೂ ತಾನು ಚೆನ್ನಾಗಿ ಓದಬೇಕು ಎಂಬ ಛಲ ಹೊಂದಬೇಕು ಎಂದರು.

ರಾಜ್ಯದ ಇಬ್ಬರು ಗ್ರಾಮೀಣ ಭಾಗದ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಉಡುಪಿ ವಿದ್ಯಾರ್ಥಿನಿಯ ತಂದೆ ಗಾರೆ ಕೆಲಸಗಾರರಾಗಿದ್ದರೆ, ಮನೋಜ್ ತಂದೆ ಹೂ ವ್ಯಾಪಾರಿಯಾಗಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ಬಡತನದ ಹಿನ್ನೆಲೆಯವರು ಹಾಗೆಯೇ ಗ್ರಾಮೀಣ ಪರಿಸರದಿಂದ ಬಂದವರು. ಪ್ರತಿಭೆ ಎಲ್ಲಿದ್ದರೂ ಅರಳುತ್ತದೆ ಎಂಬುದಕ್ಕೆ ಈ ಮಕ್ಕಳೇ ಸಾಕ್ಷಿಯಾಗಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಅಭಿಮಾನ ಮೂಡುವಂತೆ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವರ ಪತ್ನಿ ಅಭಿನಂದನೆ: ಉಡುಪಿಯ ಚಾರಮಕ್ಕಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನುಷಾಳನ್ನು ಸಚಿವ ಸುರೇಶ್ ಕುಮಾರ್ ಅವರ ಪತ್ನಿ ಕೆ.ಎಚ್.ಸಾವಿತ್ರಿಯವರೂ ಸಹ ದೂರವಾಣಿಯಲ್ಲಿ ಮಾತನಾಡಿ ಅಭಿನಂದಿಸಿದರು. ಪ್ರಧಾನಮಂತ್ರಿಯೊಂದಿಗೆ ಮಾತನಾಡುವ ಅವಕಾಶ ಸಿಕ್ಕಿದ್ದು ನಿನ್ನ ಜೀವನದ ಅಮೃತ ಘಳಿಗೆ. ಆ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ತನ್ನ ತಂದೆ ತಾಯಿ, ಶಾಲೆ ಮತ್ತು ರಾಜ್ಯಕ್ಕೆ ಕೀರ್ತಿ ತರುವಂತೆ ಚೆನ್ನಾಗಿ ಓದಿ ಬೆಳೆಯಬೇಕೆಂದು ಸಾವಿತ್ರಿ ಆಶಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X