Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನಸಾಮಾನ್ಯರಿಗೆ ರಕ್ಷಣಾ ಕಾರ್ಯದ ಅರಿವು...

ಜನಸಾಮಾನ್ಯರಿಗೆ ರಕ್ಷಣಾ ಕಾರ್ಯದ ಅರಿವು ಅಗತ್ಯ: ಮದನ್ ಮೋಹನ್

ರಾಸಾಯನಿಕ ದುರಂತದ ಅಣುಕು ಪ್ರದರ್ಶನದ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ19 March 2021 9:39 PM IST
share
ಜನಸಾಮಾನ್ಯರಿಗೆ ರಕ್ಷಣಾ ಕಾರ್ಯದ ಅರಿವು ಅಗತ್ಯ: ಮದನ್ ಮೋಹನ್

ಮಂಗಳೂರು, ಮಾ.19: ರಾಸಾಯನಿಕ ದುರಂತದ ತುರ್ತು ಸಂದರ್ಭದಲ್ಲಿ ಜನಸಾಮಾನ್ಯರು ತಮ್ಮ ರಕ್ಷಣೆಯ ಕಾರ್ಯದ ಬಗ್ಗೆ ಅರಿವು ಹೊಂದುವುದು ಅಗತ್ಯ ಎಂದು ಸಹಾಯಕ ಆಯುಕ್ತ ಮದನ್ ಮೋಹನ್ ಸಿ. ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಸಾಯನಿಕ ದುರಂತದ ಅಣುಕು ಪ್ರದರ್ಶನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಎನ್‌ಡಿಆರ್‌ಎಫ್ ಸಿಬ್ಬಂದಿಯಿಂದ ಜಿಲ್ಲೆಯ ಬಾಳಾ ಗ್ರಾಮದ ಬಿಎಎಸ್‌ಎಫ್ ರಾಸಾಯನಿಕ ಕಾರ್ಖಾನೆಯ ವ್ಯಾಪ್ತಿಯ ಸಾರ್ವಜನಿಕರಿಗೆ ರಾಸಾಯನಿಕ ದುರಂತದಿಂದ ಆಗುವ ಅಪಾಯವನ್ನು ತಡೆಗಟ್ಟುವ ಬಗ್ಗೆ ಅಣುಕು ಪ್ರದರ್ಶನವನ್ನು ಮಾ.20ರಂದು ಹಮ್ಮಿಕೊಳ್ಳಲಾಗುವುದು ಎಂದರು.

ರಾಸಾಯನಿಕ ಸೋರುವಿಕೆಯಿಂದಾಗುವ ಅನಾಹುತಗಳನ್ನು ಪರಿಣಿತರು ಮಾತ್ರವಲ್ಲದೆ ಜನಸಾಮಾನ್ಯರು ಆ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬಹುದು ಎಂಬ ಸಾಂದರ್ಭಿಕ ಅಣುಕು ಪ್ರದರ್ಶವು ಎಲ್ಲರಿಗೂ ಉಪಯೋಗವಾಗಲಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

ಇಂತಹ ಅನಾಹುತಗಳು ಸಂಭವಿಸಿದಾಗ ಮೊದಲು ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವರಕ್ಷಣೆ ಹಾಗೂ ಇತರರನ್ನು ರಕ್ಷಿಸುವ ಪರಿಯನ್ನು ಮನನ ಮಾಡಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಪಿಡಿಒಗಳು ರಾಸಾಯನಿಕ ಅಣುಕು ಪ್ರದರ್ಶನದ ಬಗ್ಗೆ ಜನರಿಗೆ ಅರಿವು ಮೂಡಿಸಿ, ಅಪಾಯದ ತೀವ್ರತೆಯನ್ನು ಮನದಟ್ಟು ಮಾಡಿಕೊಳ್ಳುವಂತೆ ಶ್ರಮಿಸಬೇಕು. ಅಣುಕು ಪ್ರದರ್ಶನದಲ್ಲಿ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳು ಸಹಕರಿಸಬೇಕು.

ಸಭೆಯಲ್ಲಿ ಕಾರ್ಖಾನೆ ಮತ್ತು ಬಾಯ್ಲರ್‌ನ ಉಪನಿರ್ದೇಶಕ ರಾಜೇಶ್ ಮಿಶ್ರಿ ಕೋಟಿ, ಸಹಾಯಕ ಕಮಾಂಡೆಂಟ್ ಸೆಂಥಿಲ್ ಕುಮಾರ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ವಿಜಯ್‌ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X