Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಸರಕಾರ ಬಾಂಬ್ ಹಾಕಿದರೂ ನಮ್ಮ ಹೋರಾಟ...

ಮೋದಿ ಸರಕಾರ ಬಾಂಬ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ: ರೈತ ನಾಯಕ ಡಾ.ದರ್ಶನ್ ಪಾಲ್

ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್‌

ವಾರ್ತಾಭಾರತಿವಾರ್ತಾಭಾರತಿ20 March 2021 7:31 PM IST
share
ಮೋದಿ ಸರಕಾರ ಬಾಂಬ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ: ರೈತ ನಾಯಕ ಡಾ.ದರ್ಶನ್ ಪಾಲ್

ಶಿವಮೊಗ್ಗ, ಮಾ.20: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ‌ಹೋರಾಟ‌ ನಿಲ್ಲುವುದಿಲ್ಲ. ಮೋದಿ ಸರ್ಕಾರ ನಮ್ಮ ಮೇಲೆ ಬಾಂಬ್ ಹಾಕಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ನಾಯಕ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದಿಲ್ಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಅಭೂತಪೂರ್ವ ಚಾಲನೆ ನೀಡಿದರು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಂಡು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಆಗ್ರಹಿಸಿದರು.

ಸಮಾವೇಶದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಡಾ.ದರ್ಶನ್ ಪಾಲ್, ದಿಲ್ಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ದೀರಿ. ನಿಮಗೆ ಆನಂತ ಆನಂತ ಧನ್ಯವಾದಗಳು ಎಂದರು.

ಇಂದಿಗೆ ದಿಲ್ಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದೀರಿ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದರಿಂದ ದಿಲ್ಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು ಎಂದ ಅವರು, ನಮ್ಮ ಹಾಗೆ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ಧದ ಹೋರಾಟದಲ್ಲಿ ನೀವು ನಮ್ಮ ಜೊತೆ ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ ಅವರು ಮಾತನಾಡಿ, ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾ ಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು.

ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್ ಗೂ ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X