Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8 ರಾಜ್ಯಗಳಲ್ಲಿ ಕೊರೋನ ಸೋಂಕು ಏರುಗತಿ 3...

8 ರಾಜ್ಯಗಳಲ್ಲಿ ಕೊರೋನ ಸೋಂಕು ಏರುಗತಿ 3 ದಿನದಲ್ಲಿ ಲಕ್ಷ ದಾಟಿದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ20 March 2021 11:58 PM IST
share
8 ರಾಜ್ಯಗಳಲ್ಲಿ ಕೊರೋನ ಸೋಂಕು ಏರುಗತಿ 3 ದಿನದಲ್ಲಿ ಲಕ್ಷ ದಾಟಿದ ಪ್ರಕರಣ

ಹೊಸದಿಲ್ಲಿ, ಮಾ.20: ದಿಲ್ಲಿ, ಮಹಾರಾಷ್ಟ್ರ ಸಹಿತ ಎಂಟು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೋನ ಸೋಂಕಿನ ಪ್ರಕರಣ ಏರುಗತಿಯಲ್ಲಿ ಸಾಗುತ್ತಿದ್ದು ಸತತ 10 ದಿನಗಳಿಂದ ದೈನಂದಿನ ಸೋಂಕು ಪ್ರಕರಣದಲ್ಲಿ ನಿರಂತರ ಹೆಚ್ಚಳವಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 40,953 ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ಕಳೆದ 4 ತಿಂಗಳಲ್ಲೇ ಇದು ದಿನವೊಂದರ ಅತ್ಯಧಿಕ ಸೋಂಕು ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಶನಿವಾರ ಹೇಳಿದೆ. ದೇಶದಲ್ಲಿ ಕಳೆದ 3 ದಿನದಲ್ಲೇ 1 ಲಕ್ಷಕ್ಕೂ ಅಧಿಕ ಹೊಸ ಸೋಂಕು ಪ್ರಕರಣ ದಾಖಲಾಗಿದ್ದು ನಿರಂತರ ಮೂರನೇ ದಿನ 30,000ಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಮಧ್ಯಪ್ರದೇಶ, ದಿಲ್ಲಿ, ಗುಜರಾತ್, ಕರ್ನಾಟಕ ಮತ್ತು ಹರ್ಯಾನದಲ್ಲಿ ಸೋಂಕಿನ ಪ್ರಕರಣ ಏರುಗತಿಯಲ್ಲಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕು ಪ್ರಕರಣ 1,15,55,284ಕ್ಕೇರಿದ್ದು, ಸಕ್ರಿಯ ಪ್ರಕರಣಗಳ ಪ್ರಮಾಣ 2,88,394ಕ್ಕೇರಿದೆ. ಇದು ಒಟ್ಟು ಪ್ರಕರಣಗಳ 2.49% ಪ್ರಮಾಣವಾಗಿದ್ದು ಚೇತರಿಕೆಯ ಪ್ರಮಾಣ 96.12% ಆಗಿದೆ ಎಂದು ಇಲಾಖೆಯ ಅಂಕಿಅಂಶ ತಿಳಿಸಿದೆ.

ಈ ಮಧ್ಯೆ, ಪಂಜಾಬ್‌ನಲ್ಲಿ ಮಾರ್ಚ್ ಅಂತ್ಯದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಆದೇಶಿಸಿದೆ. ಅಲ್ಲದೆ, ಸಿನೆಮ ಮಂದಿರ, ಮಾಲ್‌ಗಳಿಗೂ ಕೆಲವೊಂದು ನಿರ್ಬಂಧಗಳನ್ನು ಜಾರಿಗೊಳಿಸಿದೆ. ದೇಶದಲ್ಲಿ ದಾಖಲಾಗಿರುವ ಒಟ್ಟು ಸೋಂಕು ಪ್ರಕರಣಗಳ 76.22%ದಷ್ಟು ಪ್ರಕರಣ ಮೂರು ರಾಜ್ಯಗಳಲ್ಲೇ (ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್) ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಸತತ ದ್ವಿತೀಯ ದಿನ 25,000ಕ್ಕೂ ಹೆಚ್ಚು ಸೋಂಕು ಪ್ರಕರಣ ದಾಖಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಒಂದೇ ದಿನ 1 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದಾಖಲಾಗಿದ್ದರೆ ಛತ್ತೀಸ್‌ಗಢ, ಜಾರ್ಖಂಡ್‌ನಲ್ಲೂ ದೈನಂದಿನ ಸೋಂಕು ಪ್ರಕರಣ ಹೆಚ್ಚುತ್ತಿದೆ. ಶನಿವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಕೊರೋನ ಸೋಂಕಿನಿಂದ 188 ಸಾವು ಸಂಭವಿಸಿದ್ದು ಇದರೊಂದಿಗೆ ಸೋಂಕಿನಿಂದ ಮೃತರಾದವರ ಸಂಖ್ಯೆ 1,59,558ಕ್ಕೇರಿದೆ.

ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಮಹಾರಾಷ್ಟ್ರದಲ್ಲಿ 70, ಪಂಜಾಬ್‌ನಲ್ಲಿ 38, ಕೇರಳದಲ್ಲಿ 17 ಮರಣ ಸಂಭವಿಸಿದೆ. ಅಸ್ಸಾಂ, ಉತ್ತರಾಖಂಡ, ಒಡಿಶಾ, ಪುದುಚೆರಿ, ಲಕ್ಷದ್ವೀಪ, ಸಿಕ್ಕಿಂ, ಲಡಾಖ್, ಮಣಿಪುರ, ದಾದ್ರ ಮತ್ತು ನಾಗರ್ ಹವೇಲಿ, ದಿಯು ಮತ್ತು ದಾಮನ್, ಮೇಘಾಲಯ, ಮಿರೆರಾಂ, ನಾಗಾಲ್ಯಾಂಡ್, ತ್ರಿಪುರ, ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶಗಳಲ್ಲಿ ಸೋಂಕಿನ ಹೊಸ ಪ್ರಕರಣ ದಾಖಲಾಗಿಲ್ಲ. ದಿಲ್ಲಿಯಲ್ಲಿ ಶುಕ್ರವಾರ 716 ಹೊಸ ಸೋಂಕು ಪ್ರಕರಣ ದಾಖಲಾಗಿದೆ. ಶನಿವಾರ ಬೆಳಗ್ಗಿನವರೆಗಿನ ಮಾಹಿತಿಯಂತೆ ದೇಶದಲ್ಲಿ 4,20,63,392 ಕೊರೋನ ಲಸಿಕೆ ಡೋಸ್ ನೀಡಲಾಗಿದ್ದು ಇದರಲ್ಲಿ 77,06,839 ಆರೋಗ್ಯಕ್ಷೇತ್ರದ ಕಾರ್ಯಕರ್ತರು (ಪ್ರಥಮ ಡೋಸ್), 48,04,285 ಆರೋಗ್ಯಕ್ಷೇತ್ರದ ಕಾರ್ಯಕರ್ತರು(ಎರಡನೇ ಡೋಸ್), ಮುಂಚೂಣಿ ಕಾರ್ಯಕರ್ತರು 79,57,606 (ಪ್ರಥಮ ಡೋಸ್), 24,17,077(ದ್ವಿತೀಯ ಡೋಸ್), ಇತರ ರೋಗಲಕ್ಷಣ ಇರುವ 45 ವರ್ಷ ಮೇಲ್ಪಟ್ಟವರು 32,23,612 (ಪ್ರಥಮ ಡೋಸ್), 60 ವರ್ಷ ಮೇಲ್ಪಟ್ಟವರು 1,59,53,973 . ಕಳೆದ 24 ಗಂಟೆಗಳಲ್ಲಿ 27,23,575 ಡೋಸ್ ಲಸಿಕೆ ನೀಡಲಾಗಿದ್ದು ಇದರಲ್ಲಿ 85% ಲಸಿಕೆಯನ್ನು 10 ರಾಜ್ಯಗಳಲ್ಲಿ ನೀಡಲಾಗಿದೆ. ಕೊರೋನ ಸೋಂಕು ಹರಡದಂತೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನತೆ ನಿರ್ಲಕ್ಷ ತೋರಿರುವುದು, ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಇರುವುದು ಮತ್ತು ಸುರಕ್ಷಿತ ಅಂತರ ಪಾಲಿಸದಿರುವುದು ಸೋಂಕು ಉಲ್ಬಣಕ್ಕೆ ಕಾರಣವಾಗಿದೆ ಎಂದು ಹೇಳಿರುವ ಕೇಂದ್ರ ಸರಕಾರ, ಕೋವಿಡ್-19 ನಿರ್ವಹಣೆಗೆ ಜಾರಿಗೊಳಿಸಿರುವ ರಾಷ್ಟ್ರೀಯ ನಿರ್ದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ತಮಿಳುನಾಡು:

9- 11 ತರಗತಿ ವಿದ್ಯಾರ್ಥಿಗಳಿಗೆ ರಜೆ ಈ ಮಧ್ಯೆ, ಕೊರೋನ ಸೋಂಕು ಮತ್ತೆ ಉಲ್ಬಣಗೊಂಡಿರುವುದನ್ನು ಗಮನಿಸಿ ರಾಜ್ಯದಲ್ಲಿ 9, 10 ಮತ್ತು 11ನೇ ತರಗತಿಯನ್ನು ಮಾರ್ಚ್ 22ರಿಂದ ಮುಚ್ಚುವಂತೆ ರಾಜ್ಯ ಸರಕಾರ ನಿರ್ದೇಶಿಸಿದೆ. ಜೊತೆಗೆ, ಹಾಸ್ಟೆಲ್‌ಗಳನ್ನೂ ಮುಚ್ಚಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವಂತೆ ಸೂಚಿಸಿದೆ. 9,10 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಮುಂದುವರಿಯಲಿದೆ. ಆದರೆ ಕೊರೋನ ವಿರುದ್ಧದ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರೆಗೆ 12ನೇ ತರಗತಿ ಮುಂದುವರಿಯಲಿದೆ. ಕೊರೋನ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ: ಮುಂದಿನ ತಿಂಗಳು ಪರೀಕ್ಷೆ

ಮುಂಬೈ, ಮಾ.20: 12 ಮತ್ತು 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದಿನ ತಿಂಗಳು ಆಫ್‌ಲೈನ್ (ವಿದ್ಯಾರ್ಥಿಗಳ ದೈಹಿಕ ಹಾಜರಾತಿ) ವಿಧಾನದಲ್ಲಿ ನಡೆಸಲಾಗುವುದು ಎಂದು ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯಬೇಕಾಗುತ್ತದೆ. ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಯೇ ಅವರಿಗೆ ಪರೀಕ್ಷಾ ಕೇಂದ್ರವಾಗಿರುತ್ತದೆ. ನಿಗದಿತ 3 ಗಂಟೆಗಳ ಜೊತೆಗೆ, ಹೆಚ್ಚುವರಿಯಾಗಿ ಅರ್ಧಗಂಟೆಯ ಅವಕಾಶ ನೀಡಲಾಗುತ್ತದೆ. ಪರೀಕ್ಷೆಯ ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿದ್ದು ಲಿಖಿತ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎಪ್ರಿಲ್ 23ರಿಂದ ಮೇ 21ರವರೆಗೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಎಪ್ರಿಲ್ 29ರಿಂದ ಮೇ 20ರ ಅವಧಿಯಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಮಂಡಳಿ ಈಗಾಗಲೇ ಪ್ರಕಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X