ಸಿಆರ್‍ಪಿಎಫ್ ಯೋಧ ಮೌಲಾ ಹುಸೇನ್ ನಿಧನ

ಬೆಳಗಾವಿ, ಮಾ.21: ಸಿಆರ್‍ಪಿಎಫ್‍ನ ಕೋಬ್ರಾ ಬಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಮೌಲಾ ಹುಸೇನ್ ಕಲೇಬಾಯಿ(40) ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಗದಗ ತಾಲೂಕಿನ ಹೊಂಬಳ ಗ್ರಾಮದವರಾದ ಮೌಲಾ ಹುಸೇನ್, ಹಲವು ದಿನಗಳಿಂದ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಸಂಜೆ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಅವರು ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವನ್ನ ಅಗಲಿದ್ದಾರೆ. ರವಿವಾರ ಹೊಂಬಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
Next Story





