ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಸೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿರುವ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿದ್ದಾರೆಂಬ ಬಗ್ಗೆ ಮಾಹಿತಿ ಲಭಿಸಿದ ಬಳಿಕ ಭದ್ರತಾ ಪಡೆಗಳು ಮಧ್ಯರಾತ್ರಿಯ ಹೊತ್ತಿಗೆ ಜಿಲ್ಲೆಯ ಮನಿಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ಒಂದೆರಡು ಗಂಟೆಗಳ ನಂತರ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಉಗ್ರರಿಗೆ ಶರಣಾಗುವಂತೆ ಸೂಚಿಸಿತು. ಆದರೆ ಉಗ್ರರು ಶರಣಾಗತಿಗೆ ನಿರಾಕರಿಸಿದರು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





