ಪಕ್ಷಿಕೆರೆ: ಟಿಪ್ಪರ್ ಅಡಿಗೆ ಬಿದ್ದು ಕಾರ್ಮಿಕ ಮೃತ್ಯು

ಮುಲ್ಕಿ, ಮಾ.22: ಜಮೀನು ಸಮತಟ್ಟು ಕಾಮಗಾರಿ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಇಂದು ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
ಮೃತರನ್ನು ಮಧ್ಯ ಪ್ರದೇಶ ಮೂಲದ ರಾಮಪ್ರಸಾದ್(28) ಎಂದು ಗುರುತಿಸಲಾಗಿದೆ.
ಸ್ಥಳೀಯ ನಿವಾಸಿ ಸುಲೈಮಾನ್ ಎಂಬವರಿಗೆ ಸೇರಿದ ಜಮೀನನ್ನು ಮನೆ ನಿವೇಶನಕ್ಕಾಗಿ ಸಮತಟ್ಟು ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜೇಸಿಬಿ ಸಹಾಯದಿಂದ ಸಮತಟ್ಟು ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ನಡಿಗೆ ಬಿದ್ದ ರಾಮಪ್ರಸಾದ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story







