ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ತಳ್ಳಿ ಹಾಕಿದ ಎನ್‌ಐಎ ಕೋರ್ಟ್

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ ನ್ಯಾಯಾಲವು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ತನಿಖಾ ದಳವು ಅವರ ವಿರುದ್ಧ ಈ ಆರೋಪ ಮಾಡಿದ್ದು, ಈ ಕುರಿತಾದಂತೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ನಡುವೆ ಸ್ವಪ್ನಾ ಸುರೇಶ್ ರನ್ನು ಬಲವಂತಪಡಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರ ಹೆಸರು ಹೇಳಿಸಲಾಗಿತ್ತು ಎಂದು ಅವರ ಭದ್ರತಾ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ಕೇರಳ ಪೊಲೀಸರು ಈಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಿದ್ದರು.
ಸದ್ಯ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯನ್ನು ಕೊಚ್ಚಿಯಲ್ಲಿರುವ ರಾಷ್ಟ್ರೀಯ ತನಿಖಾ ದಳ ನ್ಯಾಯಾಲವು ತಳ್ಳಿ ಹಾಕಿದೆ ಎಂದು ತಿಳಿದು ಬಂದಿದೆ.
Next Story





