ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಗೆ ಕೋವಿಡ್ ದೃಢ

ಹೊಸದಿಲ್ಲಿ: ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಗೆ ಕೊರೋನ ಸೋಂಕು ದೃಢಪಟ್ಟಿದೆ ಎಂಧು ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ತಿಳಿಸಿದ್ದಾರೆ.
ಕೊರೋನ ವೈರಸ್ ಪರೀಕ್ಷಾ ವರದಿಯು ಪಾಸಿಟಿವ್ ಆಗಿದೆ ಎಂದು ಟ್ವೀಟ್ ಮಾಡಿದ ಅವರು, “ನಾನು ಚೆನ್ನಾಗಿದ್ದೇನೆ ಮತ್ತು ನನಗೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಮೇಲ್ವಿಚಾರಣೆಯಲ್ಲಿ ನಾನು ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿರುವವರು, ದಯವಿಟ್ಟು ಜಾಗರೂಕರಾಗಿರಿ ಮತ್ತು ನಿಮ್ಮನ್ನು ಪರೀಕ್ಷಿಸಿಕೊಳ್ಳಿ.” ಎಂದು ಟ್ವೀಟ್ ಮಾಡಿದ್ದಾರೆ.
मेरी कोरोना टेस्ट रिपोर्ट पॉजिटिव आई है। मैं ठीक हूँ और मुझे कोई परेशानी नहीं है । डॉक्टर्स की निगरानी में मैंने स्वयं को आइसोलेट कर लिया है ।आप में से जो भी लोग गत कुछ दिनों में मेरे निकट संपर्क में आयें हैं, कृपया सावधानी बरतें और अपनी जाँच करवाएं।
— Tirath Singh Rawat (@TIRATHSRAWAT) March 22, 2021
Next Story







