Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಂಬೆಗೆ ಹೋದವರು ಮಾತ್ರ ಯಾಕೆ ಷಡ್ಯಂತ್ರ...

ಬಾಂಬೆಗೆ ಹೋದವರು ಮಾತ್ರ ಯಾಕೆ ಷಡ್ಯಂತ್ರ ಎಂದು ಕೋರ್ಟ್ ಗೆ ಹೋದರು: ಸಿದ್ದರಾಮಯ್ಯ ಪ್ರಶ್ನೆ

ಸದನದಲ್ಲಿ ಪ್ರತಿಧ್ವನಿಸಿದ ಅಶ್ಲೀಲ ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 March 2021 4:08 PM IST
share
ಬಾಂಬೆಗೆ ಹೋದವರು ಮಾತ್ರ ಯಾಕೆ ಷಡ್ಯಂತ್ರ ಎಂದು ಕೋರ್ಟ್ ಗೆ ಹೋದರು: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಮಾ. 22: ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿರುವ, ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ 'ಅಶ್ಲೀಲ ಸಿಡಿ ಪ್ರಕರಣ' ವಿಧಾನಸಭೆಯಲ್ಲಿ ಇಂದು ಮತ್ತೊಮ್ಮೆ ಪ್ರತಿಧ್ವನಿಸಿತು. 

‘ಸಿಡಿ ಪ್ರಕರಣ' ಸಂಬಂಧ ಚರ್ಚೆಗೆ ಅವಕಾಶ ಕೋರಿ ‘ನಿಲುವಳಿ ಸೂಚನೆ' ಮಂಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ಪೀಕರ್ ಕಾಗೇರಿ ಆಹ್ವಾನಿಸಿದರು. ಈ ಸಂದರ್ಭ ಗೃಹ ಸಚಿವ ಬೊಮ್ಮಾಯಿ, ಇದು 'ನಿಲುವಳಿ ಸೂಚನೆ' ಅಡಿಯಲ್ಲಿ ಬರುವುದಿಲ್ಲ ಎಂದು ತಿಳಿಸಿದರು. ಬಳಿಕ ಬಳಿಕ ಸ್ಪೀಕರ್ ಕಾಗೇರಿ ಅವರು ಈ ಬಗ್ಗೆ ನಿಯಮ 69ರ ಅಡಿಯಲ್ಲಿ ಚರ್ಚಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿ, ಸದನವನ್ನು 3 ಗಂಟೆಗೆ ಸೇರುವಂತೆ ಮುಂದೂಡಿದರು.

ಬಳಿಕ ಸದನ ಸೇರಿದಾಗ ಸಿದ್ದರಾಮಯ್ಯ ಮಾತನಾಡಿ ಸಿಡಿ ಬಿಡುಗಡೆ ಪ್ರಕರಣವನ್ನು ಉಲ್ಲೇಖಿಸಿದರು. ಮಾರ್ಚ್ 2ರಂದು ಅಶ್ಲೀಲ ಸಿಡಿ ಬಿಡುಗಡೆಯಾಗಿದೆ. ಇದು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಸಿಡಿ ಬಗ್ಗೆ ದಿನೇಶ್ ಕಲ್ಲಹಳ್ಳಿ ಎಂಬವರು ದೂರು ನೀಡಿದರೂ, ಎಫ್ಐಆರ್ ದಾಖಲಾಗಿಲ್ಲ. ಕೆಲಸ ಕೇಳಿ ಬಂದ ಯುವತಿಯನ್ನು ಜೊತೆ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಘಟನೆ ಬಗ್ಗೆ ಮೊದಲು ಇದು ಷಡ್ಯಂತ್ರ ಎಂದಿದ್ದ ರಮೇಶ್ ಜಾರಕಿಹೊಳಿ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿಸಿದರು.

ಇದಾದ ಬಳಿಕ ಮಾರ್ಚ್ 6ರಂದು ಡಾ.ಸುಧಾಕರ್, ಬಿ.ಸಿ.ಪಾಟೀಲ್, ಬೈರತಿ ಬಸವರಾಜು, ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಹಿತ ಆರು ಮಂದಿ ಸಚಿವರು ಕೋರ್ಟ್ ಮೆಟ್ಟಿಲೇರಿ, ತಮ್ಮ ವಿರುದ್ಧ ಮಾನಹಾನಿಕರ, ಆಕ್ಷೇಪಾರ್ಹ ಸುದ್ಧಿ ಬಿತ್ತರಿಸದಂತೆ ತಡೆಯಾಜ್ಞೆ ತಂದಿದ್ದಾರೆ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿದರು ಎಂದು ಸಿದ್ದರಾಮಯ್ಯ ಹೇಳಿದರು.

ಈ ಸಂದರ್ಭ ಗೃಹ ಸಚಿವ ಬೊಮ್ಮಾಯಿ ಎದ್ದು ನಿಂತು ಷಡ್ಯಂತ್ರದಿಂದ ರಕ್ಷಣೆ ಹೊಂದಲು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಸಮರ್ಥಿಸಿದರು. ಮಧ್ಯಪ್ರವೇಶಿಸಿದ ಡಿ.ಕೆ ಶಿವಕುಮಾರ್ ಮಾತನಾಡಲು ಅವಕಾಶ ನೀಡಿ, ಬಳಿಕ ನೀವು ಉತ್ತರ ನೀಡುವಂತೆ ತಿಳಿಸಿದರು.

ಬಳಿಕ ಸಿದ್ದರಾಮಯ್ಯ ಮಾತನಾಡಿ, ತಮಗೆ ಭಯ, ಆತಂಕ ಇದೆ, ಸಿಡಿ ಬಿಡುಗೆಯಾಗುವ ಬಗ್ಗೆ ಭಯವಿದೆ ಎಂದು ಕೋರ್ಟ್ ಮೊರೆ ಹೋದದ್ದು ಕರ್ನಾಟಕದ ಇತಿಹಾಸದಲ್ಲಿ ಮೊದಲು. ಇದುವರೆಗೂ ಯಾರೂ ಹೀಗೆ ನ್ಯಾಯಲಯಕ್ಕೆ ಹೋಗಿಲ್ಲ. 19 ಸಿಡಿಗಳಿರಬಗಹುದು ಎಂದು ಯಾರೋ ಹೇಳಿದಾಗ ಇವರೇಕೆ ನ್ಯಾಯಾಲಯಕ್ಕೆ ಹೋದರು ? ಆದರೆ ಬೋಪಯ್ಯ, ಗೋಪಾಲಯ್ಯ ಯಾಕೆ ಹೋಗಿಲ್ಲ ? ಬಾಂಬೆಗೆ ಹೋದವರು ಮಾತ್ರ ಯಾಕೆ ಈ ಷಡ್ಯಂತ್ರವಾಗುತ್ತದೆ ಎಂದು ಭಾವಿಸಿದರು. ಈಶ್ವರಪ್ಪ, ಶೆಟ್ಟರ್, ಕತ್ತಿ ಯಾಕೆ ತಮ್ಮ ವಿರುದ್ಧ ಷಡ್ಯಂತ್ರವಾಗುತ್ತದೆ ಎಂದು ಭಾವಿಸಿಲ್ಲ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X