ಮಾ.23: ಹುತಾತ್ಮರ ನೆನಪಿನಲ್ಲಿ ರಕ್ತದಾನ ಶಿಬಿರ
ಮಂಗಳೂರು, ಮಾ.22: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖ್‌ದೇವ್ ಅವರ ಹುತಾತ್ಮ ದಿನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಾ.23ರಂದು ಬೆಳಗ್ಗೆ 9ಕ್ಕೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Next Story





