Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮದುವೆ ಸಮಾರಂಭಗಳಲ್ಲಿ ಮಾರ್ಗಸೂಚಿ...

ಮದುವೆ ಸಮಾರಂಭಗಳಲ್ಲಿ ಮಾರ್ಗಸೂಚಿ ಪಾಲಿಸದಿದ್ದರೆ ದಂಡ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ22 March 2021 10:36 PM IST
share
ಮದುವೆ ಸಮಾರಂಭಗಳಲ್ಲಿ ಮಾರ್ಗಸೂಚಿ ಪಾಲಿಸದಿದ್ದರೆ ದಂಡ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾ. 22: ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಆದರೆ, ಸೆಮಿ ಲಾಕ್‍ಡೌನ್ ಅಥವಾ ಲಾಕ್‍ಡೌನ್ ಇಂದಿನ ಪರಿಸ್ಥಿತಿಗೆ ಯಾವುದೇ ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಕೇರಳ ಗಡಿಭಾಗಗಳಿಂದ ಬರುವ ಜನರ ಮೇಲೆ ತೀವ್ರ ನಿಗಾ ಇರಿಸುವುದು. ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ರಾಜ್ಯಕ್ಕೆ ಬಿಡದಿರುವುದು ಅಥವಾ ಅಲ್ಲೇ ಪರೀಕ್ಷೆ ಮಾಡುವುದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದು, ಜನರಲ್ಲಿ ಹೆಚ್ಚು ಅರಿವು ಮೂಡಿಸುವುದು ಎನ್ನುವ ವಿಷಯಗಳ ಬಗ್ಗೆ ಆರೋಗ್ಯ ಇಲಾಖೆಯ ಸಭೆಯಲ್ಲಿ ಚರ್ಚೆಯಾಗಿದೆ. ಜನರು ಆದಷ್ಟು ಬೇಗ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಲಸಿಕೆ ಪಡೆಯುವಂತೆ ಮಾಡಬೇಕಿದೆ ಎಂದು ಹೇಳಿದರು.

ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲು ಗೃಹ ಇಲಾಖೆಯ ಸಹಯೋಗ ಬೇಕಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಾಗಲೇ ಸಭೆ ನಡೆಸಿದ್ದಾರೆ. ಸೆಮಿ ಲಾಕ್‍ಡೌನ್, ಲಾಕ್‍ಡೌನ್ ಎಲ್ಲ ಇಂದಿನ ಪರಿಸ್ಥಿತಿಗೆ ಅನ್ವಯವಾಗಲ್ಲ. ಹಿಂದಿನ ತಪ್ಪುಗಳನ್ನು ನೋಡಿಕೊಂಡು ಈಗ ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.

ಮಾರ್ಗಸೂಚಿ ಪಾಲಿಸದಿದ್ದರೆ ದಂಡ: ಮದುವೆ ಸಮಾರಂಭಗಳಲ್ಲಿ ನಿಗದಿಪಡಿಸಿದ ಮಿತಿ, ಸುರಕ್ಷಿತ ಅಂತರ, ಮಾಸ್ಕ್ ಧರಿಸುವ ಕ್ರಮ ಅನುಸರಿಸಬೇಕು. ಇಲ್ಲದಿದ್ದರೆ ಮಾಲಕರ ಮೇಲೆ, ಆಯೋಜಕರ ಮೇಲೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳಬೇಕೆಂದು ಸೂಚಿಸಲಾಗಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿ, ಸೋಂಕಿತರ ಪ್ರಮಾಣ ಹೆಚ್ಚಿದ್ದರೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಕ್ರಮ ವಹಿಸಲಾಗುವುದು ಎಂದ ಅವರು, ಬೆಂಗಳೂರಿನಲ್ಲಿ ಈ ವಾರದಿಂದಲೇ ಮೂರು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಇವೆಲ್ಲ ಕ್ರಮಗಳಿಂದ ಕೋವಿಡ್ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X