Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣ: ನಿಯಮ...

ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣ: ನಿಯಮ 68ರ ಅಡಿ ಚರ್ಚೆಗೆ ಅವಕಾಶ- ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ22 March 2021 11:29 PM IST
share
ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣ: ನಿಯಮ 68ರ ಅಡಿ ಚರ್ಚೆಗೆ ಅವಕಾಶ- ಬಸವರಾಜ ಹೊರಟ್ಟಿ

ಬೆಂಗಳೂರು, ಮಾ.22: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೊ ಪ್ರಕರಣವನ್ನು ಸೋಮವಾರ ಪರಿಷತ್‍ನಲ್ಲಿ ಕಾಂಗ್ರೆಸ್ ಪ್ರಸ್ತಾಪ ಮಾಡಿದೆ. ಪ್ರತಿಪಕ್ಷದ ನಿಲುವಳಿ ಸೂಚನೆಯನ್ನು ನಿಯಮ 68ರ ಅಡಿ ಚರ್ಚೆಗೆ ಅವಕಾಶ ಕಲ್ಪಿಸಿ ಸಮಯ ನಿಗದಿಪಡಿಸಲಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್ ನೀಡಿದರು.

ವಿಧಾನ ಪರಿಷತ್‍ನ ಶೂನ್ಯ ವೇಳೆ ನಂತರ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅವರು ರಮೇಶ್ ಜಾರಕಿಹೊಳಿ ಅಶ್ಲೀಲ ವೀಡಿಯೋ ವಿಚಾರದ ನಿಲುವಳಿ ಸೂಚನೆ ಮಂಡಿಸಿದರು. ಸರಕಾರದ ಆರು ಸಚಿವರು ಕೋರ್ಟ್ ಮೊರೆ ಹೋಗಿ ತಮ್ಮ ವಿರುದ್ಧ ಮಾನಹಾನಿಕರ ವಿಷಯ ಬಿತ್ತರಿಸಬಾರದೆಂಬ ತಡೆಯಾಜ್ಞೆ ತಂದಿದ್ದಾರೆ. ಇದರಿಂದ ರಾಜ್ಯದ ಮರ್ಯಾದೆ ದೇಶ, ವಿದೇಶಗಳಲ್ಲಿ ಹರಾಜಾಗಿದೆ ಎಂದು ಆರೋಪಿಸಿದರು.

ಅಶ್ಲೀಲ ವೀಡಿಯೊ ಬಗ್ಗೆ ಯಾರು ಒಬ್ಬರೂ ದೂರು ನೀಡುವ ಮೊದಲೇ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ವಹಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ನೀಡಿದ ದೂರು, ಸಂತ್ರಸ್ತೆ ಪೋಷಕರು ನೀಡಿದ ದೂರಿನಂತೆ ತನಿಖೆ ನಡೆಯುತ್ತಿರುವುದು ಅನುಮಾನವಾಗಿದೆ. ಮಹಿಳಾ ಆಯೋಗ ಸಂತ್ರಸ್ತೆಗೆ ರಕ್ಷಣೆ ನೀಡುವಂತೆ ಸೂಚಿಸಿದ್ದರೂ ಈವರೆಗೂ ಸಂತ್ರಸ್ತೆ ಪತ್ತೆ ಮಾಡಿಲ್ಲ. ರಕ್ಷಣೆ ಕೊಡುವ ಕೆಲಸವಾಗಿಲ್ಲ. ಎಸ್‍ಐಟಿ ತನಿಖೆ ನೋಡಿದರೆ ವೀಡಿಯೊ ವಿಷಯದಲ್ಲಿ ತನಿಖೆ ಬೇರೆ ಹಾದಿಯಲ್ಲಿದೆ ಅನಿಸುತ್ತಿದೆ.

ಪ್ರಕರಣ ರಾಜ್ಯದ ಘನತೆಗೆ ಕುಂದು ತರುವಂತಿದೆ. ನಿಯಮ 59ರ ಅಡಿ ಚರ್ಚೆಗೆ ಅವಕಾಶ ಕೊಡುವಂತೆ ಮನವಿ ಮಾಡಿದರು. ಪ್ರತಿಪಕ್ಷದ ನಿಲುವಳಿ ಸೂಚನೆಗೆ ಸಚಿವ ನಾರಾಯಣಗೌಡ ಆಕ್ಷೇಪಿಸಿದರು. ಈ ಹಿಂದೆ ಯಾರೂ ಕೋರ್ಟ್‍ಗೆ ಹೋಗಿಲ್ಲವೇ? ಎಂದು ಪ್ರತಿಪಕ್ಷವನ್ನು ಪ್ರಶ್ನಿಸಿದರು. ನಮ್ಮ ಗೌರವಕ್ಕೆ ಚ್ಯುತಿ ಬಂದಿದೆ. ಹೀಗಾಗಿ, ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಅಷ್ಟೇ ಎಂದು ಎಸ್.ಆರ್.ಪಾಟೀಲ್ ವಿರುದ್ಧ ಹರಿಹಾಯ್ದರಲ್ಲದೇ, ನ್ಯಾಯಾಲಯದ ಮೊರೆ ಹೋಗಿದ್ದನ್ನು ಸಮರ್ಥಿಸಿಕೊಂಡರು.

ನಂತರ ಸಭಾಪತಿ ಬಸವರಾಜ ಹೊರಟ್ಟಿ ಕಾಂಗ್ರೆಸ್‍ನ ನಿಲುವಳಿ ಸೂಚನೆಯನ್ನು ನಿಯಮ 68ಕ್ಕೆ ಪರಿವರ್ತನೆ ಮಾಡಿ ಸಮಯ ನಿಗದಿಪಡಿಸುವುದಾಗಿ ರೂಲಿಂಗ್ ನೀಡಿದರು. ಸಭಾಪತಿ ರೂಲಿಂಗ್ ನೀಡಿದ ನಂತರ ನಿರ್ಧಾರ ಪುನರ್ ಪರಿಶೀಲಿಸುವಂತೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದರು.

ಕಾಂಗ್ರೆಸ್ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ ಮಾತನಾಡಿ, ಅಶ್ಲೀಲ ವೀಡಿಯೊ ವಿಷಯ ಚರ್ಚೆಗೆ ಅವಕಾಶ ನೀಡುವುದಾಗಿ ರೂಲಿಂಗ್ ನೀಡಿದ್ದೀರಿ. ಆದರೆ, ಯಾವಾಗ ಅವಕಾಶ ಕೊಡುತ್ತೀರಿ ಎಂದು ಹೇಳಬೇಕು ಎಂದರು. ಪರಿಶೀಲಿಸಿ ಸಮಯ ನಿಗದಿಪಡಿಸುವ ಸಭಾಪತಿಗಳ ಭರವಸೆಗೆ ಒಪ್ಪದೆ ಈಗಲೇ ಸಮಯ ಹೇಳಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ಏರಿದ ದನಿಯಲ್ಲೇ ಸಭಾಪತಿಗಳು ಅದು ನನ್ನ ಕೆಲಸ, ನಾನು ಸಮಯ ನಿಗದಿಪಡಿಸುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X