Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನ್ಸುಖ್ ಹಿರೇನ್ ನಿಗೂಢ ಸಾವಿನ ಪ್ರಕರಣ:...

ಮನ್ಸುಖ್ ಹಿರೇನ್ ನಿಗೂಢ ಸಾವಿನ ಪ್ರಕರಣ: ಪೊಲೀಸ್ ಅಧಿಕಾರಿ ಸಚಿನ್ ವಝೆ ಮುಖ್ಯ ಆರೋಪಿ

ಪ್ರಕರಣ ಭೇದಿಸಿರುವುದಾಗಿ ಘೋಷಿಸಿದ ಎನ್‌ಐಎ

ವಾರ್ತಾಭಾರತಿವಾರ್ತಾಭಾರತಿ22 March 2021 11:43 PM IST
share
ಮನ್ಸುಖ್ ಹಿರೇನ್  ನಿಗೂಢ ಸಾವಿನ ಪ್ರಕರಣ: ಪೊಲೀಸ್ ಅಧಿಕಾರಿ ಸಚಿನ್ ವಝೆ ಮುಖ್ಯ ಆರೋಪಿ

ಮುಂಬೈ,ಮಾ.21: ವಾಹನಗಳ ಬಿಡಿಭಾಗಗಳ ವ್ಯಾಪಾರಿ ಮನ್ಸುಖ್ ಹಿರೇನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ತಾನು ಭೇದಿಸಿರುವುದಾಗಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹದಳವು ತಿಳಿಸಿದೆ.

ಹಿರಾನಿ ಅವರು ಫೆಬ್ರವರಿ 25ರಂದು ರಿಲಯನ್ಸ್ ಉದ್ಯಮ ಸಮೂಹದ ವರಿಷ್ಠ ಮುಖೇಶ್ ಅಂಬಾನಿಯ ಅವರು ನಿವಾಸದ ಹೊರಗೆ ಪತ್ತೆಯಾದ ಸ್ಫೋಟಕ ತುಂಬಿದ ಕಾರಿನ ಮಾಲಕರಾಗಿದ್ದಾರೆ.

ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಝೆ ಅವರು ಪ್ರಕರಣದ ಪ್ರಮುಖ ಆರೋಪಿ ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹದಳವು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.

 ಮಹಾರಾಷ್ಟ್ರ ಎಟಿಎಸ್‌ನ ಉಪ ಮಹಾನಿರೀಕ್ಷಕ ಶಿವ್‌ದೀಪ್ ಲಾಂಡೆ ತನ್ನ ಫೇಸ್‌ಬುಕ್ ಖಾತೆಯಲ್ಲೂ ಈ ವಿಷಯವನ್ನು ಪ್ರಕಟಿಸಿದ್ದಾರೆ.

‘‘ಕೋಲಾಹಲಕಾರಿ ಮನ್‌ಸುಖ್ ಹಿರಾನ್ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ” ಎಂದು ಲಾಂಡೆ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ಪ್ರಕರಣವನ್ನು ಭೇದಿಸಲು ಹಗಲು,ರಾತ್ರಿ ಶ್ರಮಿಸಿದ ನನ್ನ ಎಟಿಎಸ್ ಸಹದ್ಯೋಗಿಗಳಿಗೆ ನನ್ನ ಸಲ್ಯೂಟ್’’ ಎಂದವರು ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಆದಾಗ್ಯೂ ಹಿರಾನ್ ಶಂಕಿತ ಕೊಲೆ ಪ್ರಕರಣದ ಹಿಂದಿರುವ ಉದ್ದೇಶ ಹಾಗೂ ಹತ್ಯೆಯನ್ನು ಹೇಗೆ ನಡೆಸಲಾಯಿತು ಎಂಬ ಬಗ್ಗೆ ಯಾವುದೇ ವಿವರಗಳನ್ನು ನೀಡಲು ಎಟಿಎಸ್ ನಿರಾಕರಿಸಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ತುಂಬಿದ ಕಾರು ಪತ್ತೆಯಾದ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ ಮರುದಿನವೇ ಲಾಂಡೆ ಈ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ ಹಿರಾನ್ ಸಾವಿನ ಪ್ರಕರಣದಲ್ಲಿ ಶಾಮೀಲಾಗಿದ್ದಾರೆಂಬ ಶಂಕೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಎಟಿಎಸ್ ಶನಿವಾರ ವಶಕ್ಕೆ ತೆಗೆದುಕೊಂಡಿದೆ. ಆರೋಪಿಗಳನ್ನು ವಿನಾಯಕ್ ಶಿಂಧೆ ಹಾಗೂ ನರೇಶ್ ಧರೆ ಎಂದು ಗುರುತಿಸಲಾಗಿದೆ. ಲಖನ್ ಭಯ್ಯ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಶಿಂಧೆ ದೋಷಿಯಾಗಿದ್ದ. ಇನ್ನೋರ್ವ ಬಂಧಿತ ಬುಕ್ಕಿ ಎನ್ನಲಾಗಿದೆ. ಥಾಣೆಯ ನ್ಯಾಯಾಲಯವೊಂದು ಶಿಂಧೆ ಹಾಗೂ ಧರೆ ಅವರನ್ನು ಮಾರ್ಚ್ 30ರವರೆಗೆ ಎನ್‌ಐಎ ಕಸ್ಟಡಿಗೆ ಒಪ್ಪಿಸಿದೆ.

ಹಿರಾನ್ ಅವರು ಮಾರ್ಚ್ 5ರಂದು ಮುಂಬೈ ಸಮೀಪದ ಕಡಲ ತೀರದ ಬಳಿ ಸಾವನ್ನಪ್ಪಿ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಫೋಟಕ ಪತ್ತೆ ಪತ್ತೆ ಪ್ರಕರಣದ ಮುಖ್ಯ ತನಿಖಾಧಿಕಾರಿಯಾಗಿದ್ದ ಸಚಿನ್ ವಾಝೆ ಅವರು ಅಂಬಾನಿ ನಿವಾಸದ ಸಮೀಪ ಪತ್ತೆಯಾದ ಕಾರನ್ನು ನಾಲ್ಕು ತಿಂಗಳ ಹಿಂದೆ ಬಳಸಿಕೊಂಡಿದ್ದರು ಹಾಗೂ ಫೆಬ್ರವರಿ 5ರಂದು ಅದನ್ನು ಹಿಂತಿರುಗಿಸಿದ್ದರು. ತನ್ನ ಪತಿಯ ಸಾವಿನಲ್ಲಿ ವಝೆ ಅವರ ಪಾತ್ರವಿರುವುದಾಗಿಯೂ ಹಿರಾನ್ ಅವರ ಪತ್ನಿ ಆಪಾದಿಸಿದ್ದಾರೆ.

ಈ ವಾರದ ಆರಂಭದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಸ್ಫೋಟಕವನ್ನು ಇರಿಸಿದ ಕಾರನ್ನು ಅಂಬಾನಿ ನಿವಾಸದ ಸಮೀಪ ಪಾರ್ಕ್ ಮಾಡಿದ ಬಳಿಕ ಚಲಾಯಿಸಿಕೊಂಡು ಹೋಗಿದ್ದ ಕಪ್ಪು ಮರ್ಸಿಡಿಸ್ ಬೆಂಝ್ ಕಾರು ಹಾಗೂ 5 ಲಕ್ಷ ರೂ. ನಗದು ಹಾಗೂ ನೋಟು ಏಣಿಕೆ ಯಂತ್ರವನ್ನು ವಶಪಡಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X