ಪ್ರೊ. ಎಂ.ಅಬೂಬಕ್ಕರ್ ನಿಧನ : ತುಂಬೆಯಲ್ಲಿ ಶ್ರದ್ಧಾಂಜಲಿ ಸಭೆ

ಬಂಟ್ವಾಳ, ಮಾ.23: ಮಂಗಳವಾರ ಬೆಳಗ್ಗೆ ನಿಧನರಾದ ತುಂಬೆ ಬಿ.ಎ. ವಿದ್ಯಾ ಸಂಸ್ಥೆಗಳ ಸ್ಥಾಪಕ ಪ್ರಾಂಶುಪಾಲ, ಪ್ರಸಕ್ತ ಗಲ್ಫ್ ರಾಷ್ಟ್ರಗಳಲ್ಲಿ ಶೈಕ್ಷಣಿಕ ಕೌನ್ಸಿಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಎಂ. ಅಬೂಬಕ್ಕರ್ ಅವರಿಗೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ತುಂಬೆ ಬಿ.ಎ. ಪದವಿ ಪೂರ್ವ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಯಿತು.
ಶ್ರದ್ಧಾಂಜಲಿ ಸಭೆಯಲ್ಲಿ ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬಿ. ತುಂಬೆ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಶಿಕ್ಷಕ - ರಕ್ಷಕ ಸಂಘದ ಮಾಜಿ ಅಧ್ಯಕ್ಷ ಪಿ.ಎ.ರಹೀಂ, ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಉಪನ್ಯಾಸಕ ದಿನೇಶ್ ಶೆಟ್ಟಿ ಅಳಿಕೆ, ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಕೆದಿಲ ನುಡಿನಮನ ಸಲ್ಲಿಸಿದರು.
ಶಿಕ್ಷಕ - ರಕ್ಷಕ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ, ಗ್ರಾಮ ಪಂಚಾಯತ್ ಸದಸ್ಯ ಮುಹಮ್ಮದ್ ವಳವೂರು, ಕಾಲೇಜಿನ ಆಡಳಿತ ನಿರ್ದೇಶಕ ಬಿ.ಅಬ್ದುಲ್ ಕಬೀರ್, ತುಂಬೆ ವಿದ್ಯಾ ಸಂಸ್ಥೆಗಳ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಅಗಲಿದ ಆತ್ಮಕ್ಕೆ ಎರಡು ನಿಮಿಷಗಳ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.






.jpeg)


