ದ.ಕ. ಜಿಲ್ಲೆ : 74 ಮಂದಿಗೆ ಕೊರೋನ ಸೋಂಕು
ಮಂಗಳೂರು, ಮಾ.23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದು, ಮಂಗಳವಾರ ಒಂದೇ ದಿನ 74 ಪಾಸಿಟಿವ್ ಪ್ರಕರಣ ಕಂಡುಬಂದಿವೆ. ಈ ನಡುವೆ 38 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 35,257 ಸೋಂಕಿತರ ಪೈಕಿ 33,952 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 742 ಮಂದಿ ಮೃತಪಟ್ಟಿದ್ದು, 563 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





