ಮಂಗಳೂರು: ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು : ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ಅವರ ಹುತಾತ್ಮ ದಿನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರುಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರವು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಉಪಾಧ್ಯಕ್ಷರಾದ ಗಿರೀಶ್ ಆಳ್ವ, ರಾಜ್ಯ ಕಾರ್ಯದರ್ಶಿಗಳಾದ ಸರ್ಫರಾಜ್ ನವಾಝ್, ಆಶಿತ್ ಪಿರೇರಾ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಸುನಿಲ್ ಕುಮಾರ್, ಜಯ ಕುಮಾರ್, ರಾಕೇಶ್ ದೇವಾಡಿಗ, ಅಶೋಕ್ ಪೂಜಾರ್, ಮೊಹಮ್ಮದ್ ಮೂಫೀದ್, ಬ್ಲಾಕ್ ಉಪಾಧ್ಯಕ್ಷರುಗಳಾದ ಸೌಹಾನ್ ಎಸ್ ಕೆ, ಫಹದ್ ಮುಫೀದ್, ಇಸ್ಮಾಯಿಲ್ ಸಿದ್ದಿಕ್, ಪದಾಧಿಕಾರಿಗಳಾದ ಸಂಜನಾ ಚಲವಾದಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Next Story





