Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ವರ್ಷಗಳಲ್ಲಿ ಪರಿಶಿಷ್ಟ ಮಹಿಳೆ, ಮಕ್ಕಳ...

3 ವರ್ಷಗಳಲ್ಲಿ ಪರಿಶಿಷ್ಟ ಮಹಿಳೆ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಶೇ.15 ಹೆಚ್ಚಳ

ಸಂಸದೀಯ ಸ್ಥಾಯಿ ಸಮಿತಿ ವರದಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ23 March 2021 11:17 PM IST
share
3 ವರ್ಷಗಳಲ್ಲಿ ಪರಿಶಿಷ್ಟ ಮಹಿಳೆ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಶೇ.15 ಹೆಚ್ಚಳ

ಹೊಸದಿಲ್ಲಿ,ಮಾ.23: ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಮಹಿಳೆಯರು ಹಾಗೂ ಮಕ್ಕಳ ವಿರುದ್ಧ ನಡೆದ ಅಪರಾಧ ಪ್ರಕರಣಗಳಲ್ಲಿ ಶೇ.15.55 ಶೇಕಡ ಹೆಚ್ಚಳವಾಗಿದೆಯೆಂದು ರಾಜ್ಯಸಭೆಯಲ್ಲಿ ಕಳೆದ ವಾರ ಮಂಡಿಸಿದ ವರದಿಯೊಂದು ಬಹಿರಂಗಪಡಿಸಿದೆ. ಇದೇ ಅವಧಿಯಲ್ಲಿ ದೌರ್ಜನ್ಯಗಳ ತಡೆ ಕಾಯ್ದೆಯಡಿ (ಪಿಓಎ) ಅಪರಾಧಿಗಳಿಗೆ ಶಿಕ್ಷೆಯಾದ ಪ್ರಮಾಣವು ತೀರಾ ಕಡಿಮೆಯಿದ್ದು ಶೇ.26.86 ಆಗಿದೆ ಹಾಗೂ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಸಂಖ್ಯೆ ಶೇ.84.09 ಆಗಿದೆ ಎಂದು ಆಂತರಿಕ ವ್ಯವಹಾರಗಳ ಕುರಿತ ಸಂಸದೀಯ ಸ್ಥಾಯಿ ಸಮಿತಿ ಸಲ್ಲಿಸಿದ ವರದಿ ತಿಳಿಸಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಇತ್ಯಾದಿ ಪ್ರಕರಣಗಳನ್ನು ದಾಖಲಿಸುವಾಗ ಪಿಓಎ ಕಾಯ್ದೆಯ ನಿಯಮಗಳನ್ನು ಸೇರ್ಪಡೆಗೊಳಿಸುವಂತೆ ಸಮಿತಿಯು ಕಾನೂನು ಜಾರಿ ಸಂಸ್ಥೆಗಳಿಗೆ ಶಿಫಾರಸು ಮಾಡಿದೆ.

 ಕಾಂಗ್ರೆಸ್ ಸಂಸದ ಆನಂದ ಶರ್ಮಾ ಈ ಸಮಿತಿಯ ನೇತೃತ್ವ ವಹಿಸಿದ್ದರು. 2017ರಿಂದ 2019ರ ಮಧ್ಯದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯ್ದೆಯಡಿ ದಾಖಲಾದ 1,31,430 ಅಪರಾಧಗಳ ಪ್ರಕರಣಗಳ ಪೈಕಿ ಶೇ.15.73ರಷ್ಟು ಪ್ರಕರಣಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಪರಾಧಗಳು ನಡೆದಿವೆ ಎಂದು ಸಮಿತಿಯ ದತ್ತಾಂಶಗಳು ತಿಳಿಸಿವೆ.

‘‘ಅತ್ಯಾಚಾರ, ಅತ್ಯಾಚಾರ ಯತ್ನ, ಮಾನಭಂಗದ ಉದ್ದೇಶದಿಂದ ಮಹಿಳೆಯರ ಮೇಲೆ ಹಲ್ಲೆ, ಮಾನಹಾನಿ, ಅಪಹರಣ ಹಾಗೂ ಮದುವೆಯಾಗುವಂತೆ ಬಲವಂತ ಪಡಿಸಲು ವಶದಲ್ಲಿರಿಸಿಕೊಳ್ಳುವುದು ಇತ್ಯಾದಿ ಅಪರಾಧ ಪ್ರಕರಣಗಳು ಇದರಲ್ಲಿ ಒಳಗೊಂಡಿವೆ’’ ಎಂದು ವರದಿ ತಿಳಿಸಿದೆ.

  ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು 2017ರಲ್ಲಿ 6, 321 ಆಗಿದ್ದರೆ, 2018ರಲ್ಲಿ 6800ಕ್ಕೇರಿದೆ ಹಾಗೂ 2019ರಲ್ಲಿ 7485ನ್ನು ತಲುಪಿದೆ ಎಂದು ವರದಿ ತಿಳಿಸಿದೆ.

ಮಹಿಳೆಯರ ಮಾನಹಾನಿ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿಯೂ ಗಣನೀಯ ಹೆಚ್ಚಳವಾಗಿದೆ.

 ಮಹಿಳೆಯರ ಮಾನಹಾನಿಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಯಲ್ಲಿ ಶೇ.16.25 ಏರಿಕೆಯಾಗಿದೆ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲಿ ಶೇ.15.32 ಹೆಚ್ಚಳವಾಗಿದೆ. ಆದರೆ ವಿವಾಹಕ್ಕಾಗಿ ಬಲವಂತಪಡಿಸಲು ಮಹಿಳೆಯರನ್ನು ಅಪಹರಿಸುವ ಪ್ರಕರಣಗಳ ಸಂಖ್ಯೆಯಲ್ಲಿ ಶೇ.47.61ರಷ್ಟು ಕುಸಿತವಾಗಿದೆ.

ವಿಶೇಷ ನ್ಯಾಯಾಲಯಗಳಲ್ಲಿ ದಲಿತ ಮಹಿಳೆಯರು ಹಾಗೂ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳ ವಿಚಾರಣೆಗೆ ಬಾಕಿಯುಳಿದಿರುವ ಪ್ರಕರಣಗಳ ಸಂಖ್ಯೆಯು ಅತ್ಯಧಿಕವೆಂದು ಎನ್‌ಸಿಆರ್‌ಬಿ ದತ್ತಾಂಶ ವರದಿ ತಿಳಿಸಿದೆ.

 ಪರಿಶಿಷ್ಟ ಜಾತಿಯ ಮಹಿಳೆಯರು ಹಾಗೂ ಮಕ್ಕಳ ವಿರುದ್ಧ ಹಿಂಸಾಚಾರ ಹೆಚ್ಚಲು, ಪ್ರಸಕ್ತ ಚಾಲ್ತಿಯಲ್ಲಿರುವ ಕಾನೂನುಗಳ ಕಳಪೆ ಅನುಷ್ಠಾನ ಹಾಗೂ ಕಾನೂನು ಜಾರಿ ಸಂಸ್ಥೆಗಳ ಪಕ್ಷಪಾತದ ವರ್ತನೆ ಕಾರಣವೆಂದು ವರದಿ ಬೆಟ್ಟು ಮಾಡಿದೆ.

 ಇದಕ್ಕಿಂತಲೂ ಹೆಚ್ಚಾಗಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ದೋಷಮುಕ್ತಿ ಅತ್ಯಧಿಕ ಪ್ರಮಾಣದಲ್ಲಿರುವುದು, ಪ್ರಬಲ ಹಾಗೂ ಪ್ರಭಾವಿ ಸಮುದಾಯಗಳಿಗೆ ತಮ್ಮ ಅಪರಾಧಗಳನ್ನು ಮುಂದುವರಿಸಲು ಆತ್ಮವಿಶ್ವಾಸ ನೀಡಿದೆ’’ ಎಂದು ವರದಿ ಹೇಳಿದೆ.ಜಾತಿ ಹಾಗೂ ಲಿಂಗಾಧಾರಿತ ಹಿಂಸಾಚಾರದಲ್ಲಿ ಸಂತ್ರಸ್ತರಾದವರ ಪುನರ್ವಸತಿ, ಅವರಿಗೆ ಉಚಿತ ಕಾನೂನು ನೆರವು, ವಸತಿ, ಜೀವನೋಪಾಯ, ಶಿಕ್ಷಣ ಸೌಲಭ್ಯ ಹಾಗೂ ಸುರಕ್ಷತೆಯನ್ನು ಒದಗಿಸಲು ಗೃಹ ಸಚಿವಾಲಯವು, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯದ ಜೊತೆ ಸಂಯೋಜಿತವಾಗಿ ಕಾರ್ಯನಿರ್ವಹಿಸಬೇಕೆಂದು ಸಮಿತಿಯು ಶಿಫಾಸು ಮಾಡಿದೆ.

  ಲಿಂಗ ಸಮಾನತೆಯನ್ನು ಉತ್ತೇಜಿಸಲು ಹಾಗೂ ಜಾತಿ ವ್ಯವಸ್ಥೆಯ ನಿರ್ಮೂಲನೆಗಾಗಿ ಶಾಲಾ ಪಠ್ಯಕ್ರಮಗಳಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯವು, ಶಿಕ್ಷಣ ಸಚಿವಾಲಯದ ಜೊತೆಗೂಡಿ ಶ್ರಮಿಸುವಂತೆಯೂ ವರದಿ ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X