Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕ...

ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕ ಹೆಚ್ಚಳದ ಪ್ರಸ್ತಾವನೆ ಮರುಪರಿಶೀಲಿಸಿ: ಸಚಿವ ಜಗದೀಶ್ ಶೆಟ್ಟರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 March 2021 11:44 PM IST
share
ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕ ಹೆಚ್ಚಳದ ಪ್ರಸ್ತಾವನೆ ಮರುಪರಿಶೀಲಿಸಿ: ಸಚಿವ ಜಗದೀಶ್ ಶೆಟ್ಟರ್ ಸೂಚನೆ

ಬೆಂಗಳೂರು, ಮಾ.23: ಕೋವಿಡ್ ಸಾಂಕ್ರಾಮಿಕದ ಸಂಕಷ್ಟದಿಂದ ಇತ್ತೀಚೆಗೆ ಚೇತರಿಸಿಕೊಳ್ಳುತ್ತಿರುವ ಕೈಗಾರಿಕೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗಾಧ ಪ್ರಮಾಣದ ಸಮ್ಮತಿ ಶುಲ್ಕವನ್ನು ವಿಧಿಸಿರುವುದು ಸರಿಯಲ್ಲ. ಈ ಶುಲ್ಕವನ್ನು ಹೆಚ್ಚಿಸುವ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು.

ಮಂಗಳವಾರ ವಿಕಾಸಸೌಧದಲ್ಲಿ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗಿಶ್ವರ್ ಅವರೊಂದಿಗೆ ಜಂಟಿಯಾಗಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಪರಿಸರ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಸೂಚನೆ ನೀಡಿದರು.

2020ನೆ ಸಾಲಿನ ನ.12ರಂದು ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹೊರಡಿಸಿರುವ ಪ್ರಸ್ತಾವನೆಯಲ್ಲಿ ಸಮ್ಮತಿ ಶುಲ್ಕವನ್ನು ಅಗಾಧ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಕೈಗಾರಿಕೆಗಳನ್ನು ನಡೆಸಲು ಹಾಗೂ ಹೊಸ ಕೈಗಾರಿಕೆಗಳನ್ನು ಪ್ರಾರಂಭಿಸಲು ತೊಂದರೆ ಆಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಹಲವಾರು ಕಂಪನಿಗಳು ಹಾಗೂ ಕೈಗಾರಿಕಾ ಸಂಘಗಳು ಮನವಿಯನ್ನು ನೀಡಿದ್ದವು ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಯಾವುದೇ ಶುಲ್ಕವನ್ನು ಹೆಚ್ಚು ಮಾಡುವ ಸಂಧರ್ಭದಲ್ಲಿ ಆಗಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವುದು ಸೂಕ್ತ. ಕೋವಿಡ್ ನಂತರ ನಿಧಾನವಾಗಿ ಕೈಗಾರಿಕೆಗಳು ಚೇತರಿಸಿಕೊಳ್ಳುತ್ತಿವೆ. ಅಲ್ಲದೆ, ನೂತನ ಕೈಗಾರಿಕೆಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗುತ್ತಿವೆ. ಇಂತಹ ಸಂದರ್ಭದಲ್ಲಿ ಅಗಾಧ ಪ್ರಮಾಣದಲ್ಲಿ ಶುಲ್ಕವನ್ನು ಹೆಚ್ಚಿಸುವುದು ಸರಿಯಲ್ಲ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಸ್ತಾಪವನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬಹಳಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹಲವಾರು ಕೈಗಾರಿಕೆಗಳು ಬಂಡವಾಳ ಹೂಡಲು ಮುಂದಾಗುತ್ತಿರುವ ಸಂದರ್ಭದಲ್ಲಿ ಇಂತಹ ಪ್ರಸ್ತಾವನೆಗಳು ಬೇರೆಯದ್ದೆ ಆದ ರೀತಿಯ ಸಂದೇಶವನ್ನು ರವಾನಿಸುತ್ತವೆ. ಕೈಗಾರಿಕೆಗಳು ಹಾಗೂ ಬಂಡವಾಳ ಆಕರ್ಷಣೆ ಹೆಚ್ಚಿಸಲು ಈ ಶುಲ್ಕದ ಬಗ್ಗೆ ಮರುಪರಿಶೀಲಿಸಿ ರಾಜ್ಯದಲ್ಲಿ ಪ್ರಸ್ತುತ ಇರುವ ಕೈಗಾರಿಕೆಗಳಿಗೆ ಅನುಕೂಲವಾಗುವಂತಹ ಪ್ರಸ್ತಾವನೆ ಸಲ್ಲಿಸುವಂತೆ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X