ಶ್ರೀಮಂಗಲ ಪೊರಾಡು ಗ್ರಾಮದಲ್ಲಿ ಮತ್ತೆ ಹುಲಿ ದಾಳಿ: ಹಸು ಬಲಿ

ಮಡಿಕೇರಿ ಮಾ.24: ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಹಾವಳಿ ಕಾಣಿಸಿಕೊಂಡಿದ್ದು, ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.
ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಹೋಬಳಿಯ ಪೊರಾಡು ಗ್ರಾಮದ ಬಲ್ಯಮೀದೇರಿರ ವಸಂತ ಎಂಬವರಿಗೆ ಸೇರಿದ ಹಸುವನ್ನು ಮಂಗಳವಾರ ರಾತ್ರಿ ಹುಲಿ ಕೊಂದು ಹಾಕಿದೆ ಎನ್ನಲಾಗಿದೆ.
ಇದರಿಂದ ಗ್ರಾಮದಲ್ಲಿ ಭೀತಿಯ ವಾತಾವರಣವಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story





