Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಷಯರೋಗ ಮುಕ್ತ ದೇಶ ನಿರ್ಮಾಣಕ್ಕೆ ಜನರ...

ಕ್ಷಯರೋಗ ಮುಕ್ತ ದೇಶ ನಿರ್ಮಾಣಕ್ಕೆ ಜನರ ಸಹಕಾರ ಅತ್ಯಗತ್ಯ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್

ವಾರ್ತಾಭಾರತಿವಾರ್ತಾಭಾರತಿ24 March 2021 6:19 PM IST
share
ಕ್ಷಯರೋಗ ಮುಕ್ತ ದೇಶ ನಿರ್ಮಾಣಕ್ಕೆ ಜನರ ಸಹಕಾರ ಅತ್ಯಗತ್ಯ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್

ಚಿಕ್ಕಮಗಳೂರು, ಮಾ.24: ಜಿಲ್ಲೆಯಲ್ಲಿ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಮೂಲಕ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ನಗರದ ತಾಪಂ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಪ್ರತೀ 5 ನಿಮಿಷಕ್ಕೆ ಇಬ್ಬರು ಕ್ಷಯ ರೋಗದಿಂದ ಬಲಿಯಾಗುತ್ತಿದ್ದು, ರೋಗಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕ್ಷಯರೋಗಕ್ಕೆ ಸರಿಯಾದ ಸಮಯಕ್ಕೆ ಚಿಕಿತ್ಸೆಯನ್ನು ತೆಗೆದುಕೊಂಡರೆ ರೋಗದಿಂದ ಮುಕ್ತರಾಗಬಹುದು. ಜನರಲ್ಲಿ ಕ್ಷಯ ರೋಗದ ಹರಡುವಿಕೆ, ಲಕ್ಷಣಗಳ ತಿಳುವಳಿಕೆಯ ಕೊರತೆ ಇರುವುದರಿಂದ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಿದಲ್ಲಿ ಕ್ಷಯ ರೋಗವನ್ನು ತಡೆಗಟ್ಟಬಹುದು ಎಂದು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯು 2030ರೊಳಗೆ ಕ್ಷಯ ರೋಗ ಮುಕ್ತ ವಿಶ್ವ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ. ಭಾರತ ದೇಶವನ್ನು 2025ರೊಳಗಾಗಿ ಕ್ಷಯ ರೋಗ ಮುಕ್ತ ದೇಶವನ್ನಾಗಿ ಮಾಡಲು ಸರಕಾರ ಗುರಿ ಹೊಂದಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಒಟ್ಟು 875 ಕ್ಷಯ ರೋಗಿಗಳಿದ್ದು, ರೋಗಿಗಳು ಸಂಪೂರ್ಣ ಗುಣಮುಖರಾಗುವವರೆಗೂ ನಿರಂತರ ಚಿಕಿತ್ಸೆ ಪಡೆಯುವ ಮೂಲಕ ರೋಗದಿಂದ ಮುಕ್ತರಾಗಬಹುದು ಎಂದರು.

ಕ್ಷಯ ರೋಗದ ಬಗ್ಗೆ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕಲಾ ತಂಡಗಳು, ಭಿತ್ತಿ ಪತ್ರಗಳು ಹಾಗೂ ಮಾಧ್ಯಮದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಡಿಸಿ ರಮೇಶ್ ಇದೇ ವೇಳೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 11 ಕಲಾ ತಂಡಗಳು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಕೆಂಪು ದೀಪ ಉರಿಸುವ ಮೂಲಕ ಕ್ಷಯ ರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕ್ಷಯ ರೋಗದ ನಿರ್ಮೂಲನೆಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕೆಂದು ತಿಳಿಸಿದರು.

ಸರಕಾರ 2025ರೊಳಗೆ ಕ್ಷಯರೋಗ ನಿರ್ಮೂಲನೆ ಮಾಡಲು ಯೋಜನೆ ಕೈಗೊಂಡಿದ್ದು, ವೈದ್ಯರು, ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯ. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿರುವುದರಿಂದ ಜನರಲ್ಲಿ ಅರಿವು ಮೂಡಿಸುವ ಮೂಲಕ ರೋಗದ ಲಕ್ಷಣ ಇರುವವರನ್ನು ಗುರುತಿಸಿ ಚಿಕಿತ್ಸೆಗೆ ಒಳಪಡಿಸಬೇಕು ಎಂದ ಅವರು, ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದಲ್ಲಿ 2025ಕ್ಕೂ ಮುನ್ನ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮೋಹನ್ ಕುಮಾರ್ ಮಾತನಾಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಟಿ.ಪಿ.ಬಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಕ್ಷಯರೋಗದ ಕುರಿತು ಅರಿವು ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಶ್ರಮಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ತಾಲೂಕು ವೈದ್ಯಾಧಿಕಾರಿ ಡಾ.ಸೀಮಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಹರೀಶ್‍ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್, ಜಿಲ್ಲಾ 2ನೇ ಹೆಚ್ಚುವರಿ ಶಸ್ತ್ರ ಚಿಕಿತ್ಸಕ ಡಾ.ನಾಗೇಂದ್ರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಾಜಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X