ಬೆಂಗಳೂರು: ಭ್ರಷ್ಟಾಚಾರ ಆರೋಪ; ಸಿಬಿಐ ಬಲೆಗೆ ಈಡಿ ಅಧಿಕಾರಿ

ಬೆಂಗಳೂರು, ಮಾ.24: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಬಿಐ ತಂಡದಿಂದ ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಯೋರ್ವನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಇಲ್ಲಿನ ಶಾಂತಿನಗರ ಈಡಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಲಿತ್ ಬಜಾಡ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸಿಬಿಐ ಅಧಿಕಾರಿಗಳು, ಬಂಧನದ ಬಳಿಕ ಇಲ್ಲಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದ ನಂತರ, ಆತನನ್ನು ಕರೆದೊಯ್ದರು ಎಂದು ತಿಳಿದುಬಂದಿದೆ.
Next Story





