ಮಂಗಳೂರು: ಡಿವೈಡರ್ ಢಿಕ್ಕಿ ಹೊಡೆದು ಪಿಕಪ್ ವಾಹನ ಪಲ್ಟಿ
ಮಂಗಳೂರು, ಮಾ.24: ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.
ರಾ.ಹೆ.66ರ ಕಲ್ಲಾಪು ಸಮೀಪದ ಕೆಫೆವೊಂದರ ಮುಂಭಾಗದಲ್ಲಿ ಪಿಕ್ ಅಪ್ ವಾಹನ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಚಾಲಕ ಮತ್ತು ಇನ್ನೋರ್ವ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





