ಬ್ಯಾರಿಕೇಡ್‌ಗೆ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಮಂಗಳೂರು, ಮಾ.24: ರಸ್ತೆ ಬದಿ ಇಡಲಾಗಿದ್ದ ಬ್ಯಾರಿಕೇಡ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ರಾ.ಹೆ.73ರ ವಳಚ್ಚಿಲ್ ಸಮೀಪ ನಡೆದಿದೆ.
ಸ್ಥಳೀಯ ನಿವಾಸಿ ಅಬ್ದುಲ್ ಸಲೀಂ ಅಬ್ಬಾಸ್(35) ಮೃತಪಟ್ಟವರು. ಇವರು ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ರಾತ್ರಿ ಸುಮಾರು 10:15ರ ವೇಳೆಗೆ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದರು. ಪರಿಣಾಮ ತಲೆಯ ಹಿಂಬದಿಗೆ ತೀವ್ರವಾಗಿ ಗಾಯವಾಯಿತು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





